ಚನ್ನಪಟ್ಟಣ: ಬೈಕ್ ಹರಾಜು ಮೂಲಕ ವಿನೂತನ ಪ್ರತಿಭಟನೆ

7

ಚನ್ನಪಟ್ಟಣ: ಬೈಕ್ ಹರಾಜು ಮೂಲಕ ವಿನೂತನ ಪ್ರತಿಭಟನೆ

Published:
Updated:
Deccan Herald

ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಪಟ್ಟಣದಲ್ಲಿ ಎತ್ತಿನಗಾಡಿ ಮೇಲೆ ಬೈಕ್ ಗಳನ್ನು ಇಟ್ಟು ಹರಾಜು ಮಾಡುವ ಮೂಲಕ ಸೋಮವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಕಾವೇರಿ ಸರ್ಕಲ್‌ನಲ್ಲಿ ಬೈಕ್ ಹರಾಜು ಜೊತೆಗೆ ಗ್ಯಾಸ್‌ನಿಂದ ಚಹಾ ಮಾಡಿ ಮಾರಾಟ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಜೆಗಳನ್ನು ಟೀ ಮಾರುವ ಸ್ಥಿತಿಗೆ ತಂದಿದ್ದಾರೆ ಎಂದು ಅಣಕವಾಡಿದರು.

ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಮಧ್ಯಮ ವರ್ಗ ಮತ್ತು ಜನಸಾಮಾನ್ಯರು ಹೆಚ್ಚಾಗಿ ಬಳಸುವ ವಾಹನಗಳ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಿಸುವ ಮುಖಾಂತರ ಅವರ ಬದುಕಿನ ಮೇಲೆ ಪ್ರಧಾನಿ ನರೇಂದ್ರ ಮೋದಿ ಬರೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಮಾತನಾಡಿ, ದೇಶದಾದ್ಯಂತ ‘ ಸ್ವಚ್ಛ ಭಾರತ್ ’ ಮಾಡಲು ಹೊರಟಿರುವ ಮೋದಿ ಅವರು, ಬಡವರ ಬದುಕು ಬೀದಿಗೆ ಬರುವಂತೆ ಮಾಡಿದ್ದಾರೆ ಎಂದು ಟೀಕಿಸಿದರು.

ರಾಜ್ ಕಲಾಬಳದ ಅಧ್ಯಕ್ಷ ಮಂಜುನಾಥ್, ಮುಖಂಡ ಚೇತನ್ ಕೀಕರ್, ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ಗೌಡ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಂಜಿತ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ರಾಜ್ಯ ಪದಾಧಿಕಾರಿಗಳಾದ ವೆಂಕಟರಮಣ, ರಾಜೇಶ್, ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಟೆಂಪೋ ರಾಜೇಶ್, ವೆಂಕಟಾಚಲ, ಏಸು, ಮಹದೇವಸ್ವಾಮಿ, ಕೋಟೆ ಸಿದ್ದರಾಮು, ಸಾತನೂರು ಪ್ರಕಾಶ್, ಬೆಂಗಳೂರು ನಗರ ಘಟಕದ ಕಾರ್ಯಾಧ್ಯಕ್ಷ ಚಂದ್ರೇಗೌಡ, ಆಟೋ ವೆಂಕಟೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !