ಶನಿವಾರ, ಫೆಬ್ರವರಿ 29, 2020
19 °C
ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅಭಿಮತ

ಹೊಸ ಸಂಶೋಧನೆಗಳ ಕವಚ ‘ಅನ್ವೇಷಣಾ ಪ್ರಾಧಿಕಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮುಂದಿನ ಅಧಿವೇಶನದಲ್ಲಿ ‘ಅನ್ವೇಷಣಾ ಪ್ರಾಧಿಕಾರ’ ಮಸೂದೆ ಮಂಡಿಸಲಾಗುವುದು. ಆ ಮೂಲಕ ಹೊಸ ಪರಿಕಲ್ಪನೆಗಳ ಶೋಧನೆಗಳಿಗೆ ಒತ್ತು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ಪ್ರಾಧಿಕಾರ ರಚನೆಯ ಮೂಲಕ ಸಂಶೋಧನೆಗಳಿಗೆ ಎದುರಾಗುವ ಕಾನೂನಾತ್ಮಕ ತೊಂದರೆಗಳನ್ನು ನಿವಾರಿಸಲಾಗುವುದು. ಹೆಚ್ಚಿನ ಆರ್ಥಿಕ ನೆರವು ಒದಗಿಸಲಾಗುವುದು. ಸಂಶೋಧನೆ ಕೈಗೊಳ್ಳುವವರಿಗೆ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಶೋಧನೆಗಳು ಕೇವಲ ವಿಶ್ವವಿದ್ಯಾಲಯಗಳಿಗೆ ಸೀಮಿತವಾಗಬಾರದು. ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕು. ಜನಸಾಮಾನ್ಯರನ್ನು ತಲುಪಬೇಕು. ಹೊಸ ಸಂಶೋಧನೆಗಳಿಗೆ ಪೇಟೆಂಟ್ ಪಡೆಯಲೂ ಸರ್ಕಾರ ಆರ್ಥಿಕ ನೆರವು ಒದಗಿಸುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತದೆ. ನಕಲಿ ಸಂಶೋಧನೆಗಳು, ನಕಲಿ ಗೌರವ ಡಾಕ್ಟರೇಟ್‌ಗಳ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಉದ್ಯಮಗಳ ಬೇಡಿಕೆಗೆ ಅನುಗುಣವಾಗಿ ಪಠ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ರಾಜ್ಯದ ಹಲವೆಡೆ ಧಾರವಾಡ ತರಬೇತಿ ಸಂಸ್ಥೆ ಮಾದರಿಯಲ್ಲಿ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಹೊಸ ಕಲಿಕಾ ವಿಧಾನ ಹಾಗೂ ಕೌಶಲ ಸುಧಾರಣೆಗೆ ಒತ್ತು ನೀಡಲಾಗುವುದು. ಅಂಗನವಾಡಿ ಹಂತದಿಂದಲೇ ಗುಣಮಟ್ಟದ ಕಲಿಕೆಗೆ ಒತ್ತು ನೀಡಲಾಗುವುದು ಎಂದು ವಿವರ ನೀಡಿದರು.

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಸಂಸ್ಕೃತ-ಸಂಗೀತ ವಿಭಾಗ ತೆರೆಯಲು ಚಿಂತನೆ ನಡೆದಿದೆ. ಮಾಗಡಿಯಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ 100 ಎಕರೆ ಜಾಗ ನಿಗದಿಯಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು