ಶನಿವಾರ, ಜನವರಿ 25, 2020
28 °C
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಜೊತೆ ಚರ್ಚಿಸಿ ನಿರ್ಧಾರ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಬೇಕೋ ಅಥವಾ ಪುನರ್ ರಚಿಸಬೇಕೋ ಎಂಬ ವಿಷಯದ ಕುರಿತು ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪುತ್ರಿಯ ವಿವಾಹ ಆರತಕ್ಷತೆಗೆ ಭಾನುವಾರ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಎಲ್ಲಾ ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೊ ಅಥವಾ ಬೇಡವೋ ಎನ್ನುವ ಕುರಿತೂ ವರಿಷ್ಠರ ಅಭಿಪ್ರಾಯ ಪಡೆದೇ ಮುಂದುವರಿಯುತ್ತೇವೆ‘ ಎಂದು ಸ್ಪಷ್ಟಪಡಿಸಿದರು.

‘ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 13 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಸ್ಥಾನ ಗೆದ್ದರೆ ಹೆಚ್ಚು. ಮುಂದಿನ ಮೂರೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುತ್ತೇವೆ. ಮುಂಬರುವ ಬಜೆಟ್‌ನಲ್ಲಿ ಎಲ್ಲಾ ವರ್ಗಗಳ ಹಿತ ಕಾಯುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗುವುದು. ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮುನ್ನಡೆಯುತ್ತೇವೆ‘ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು