ಶಿವಮೊಗ್ಗ: ಸಂಕ್ರಾಂತಿಯ ನಂತರ ಸಚಿವ ಸಂಪುಟ ವಿಸ್ತರಣೆ ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆ, ಪುನರ್‌ರಚನೆ ಏಕಕಾಲದಲ್ಲಿ ಆಗುವ ಕುರಿತು ಮಾಹಿತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸ್ಥಾನಮಾನ ನೀಡುವುದುಖಚಿತ ಎಂದು ಪ್ರತಿಕ್ರಿಯೆ ನೀಡಿದರು.

ಎಚ್.ವಿಶ್ವನಾಥ್, ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಭವಿಷ್ಯ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.ಉಪ ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಹಿಸಂಗ್ರಹ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ವಿಷಯಗಳನ್ನು ಬೀದಿಯಲ್ಲಿ ನಿಂತು ಮಾತನಾಡಲು ಸಾಧ್ಯವಿಲ್ಲ.ಪಕ್ಷದ ಆಂತರಿಕವಿಚಾರ ಕುಳಿತು ಬಗೆಹರಿಸಿಕೊಳ್ಳಲಾಗುವುದು ಎಂದರು.

ಮಹಾರಾಷ್ಟ್ರ ಸರ್ಕಾರ ಅನಗತ್ಯವಾಗಿ ಕನ್ನಡಿಗರನ್ನುಕೆಣಕುತ್ತಿದೆ. ಗಡಿ ವಿವಾದ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿದೆ. ಶಿವಸೇನೆ-ಎಂಇಎಸ್ ಅವಕಾಶಕ್ಕಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ರಾಜ್ಯದ ಭಾಷೆ, ನೆಲ, ಜಲದ ವಿಷಯ ಬಂದಾಗ ಕನ್ನಡಿಗರ ಸ್ವಾಭಿಮಾನಕ್ಕೆ ತಕ್ಕಂಥ ಕೆಲಸ ಮಾಡಲಾಗುವುದುಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ 1,500 ಕೋಟಿನೆರೆ ಪರಿಹಾರದ ಹಣಬಿಡುಗಡೆ ಮಾಡಿದೆ. ಶೀಘ್ರ ಪರಿಹಾರ ವಿತರಣೆ ನಡೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.