ಶುಕ್ರವಾರ, ಫೆಬ್ರವರಿ 26, 2021
26 °C

ಮೋರಿಗೆ ಕಾರು ಡಿಕ್ಕಿ : 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುದೂರು(ಮಾಗಡಿ): ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಪಾಳ್ಯ ಬಳಿ ಮಂಗಳವಾರ ಬೆಳಿಗ್ಗೆ ರಸ್ತೆ ಬದಿ ಮೋರಿಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದೊಡ್ಡಪ್ಪ ಜಗದೀಶ್‌ ಪ್ರಸಾದ್‌ ದುಬೇಯ್‌ (54), ಅವರ ಸ್ನೇಹಿತ ಜೈಶಂಕರ್‌ ಕಾರವಾರ್‌ (45) ಹಾಗೂ ಚಾಲಕ ಸುರೇಶ್‌ (25) ಮೃತರು.

ಕಾರಿನಲ್ಲಿದ್ದ ಲಾನ್‌ಮನ್‌ ಯಾದವ್‌ (40) ಅವರಿಗೆ ಗಂಭೀರ ಗಾಯಗಳಾಗಿವೆ. ಮೃತರು ಇಂಡಿಕಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೋಗಿ ಹಿಂತಿರುಗಿ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೃತರು ಉತ್ತರ ಪ್ರದೇಶದವರಾಗಿದ್ದು ಬೆಂಗಳೂರಿನ ಆರ್‌.ಟಿ. ನಗರದಲ್ಲಿ ವಾಸವಾಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.