ಭಾನುವಾರ, ಜನವರಿ 26, 2020
31 °C

ಕುವೆಂಪು ವಿ.ವಿ. ಕುಲಸಚಿವರ ವಿರುದ್ಧ ಜಾತಿನಿಂದನೆ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.

‘ಕುಲಸಚಿವರಲ್ಲಿ ಮಾಹಿತಿ ಕೇಳಲು ಹೋದಾಗ ಅವರು ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ’ ಎಂದು ಆರೋಪಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪವನ್ ಗ್ರಾಮಾಂತರ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದರು.

ದೂರಿನ ಮೇರೆಗೆ ಪ್ರಾರಂಭಿಕ ಮಾಹಿತಿ ಕಲೆ ಹಾಕಿದ ಪೊಲೀಸರು, ಕುಲಸಚಿವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು