ಮಂಗಳವಾರ, ಸೆಪ್ಟೆಂಬರ್ 21, 2021
25 °C

ಮಹಿಳೆಯ ಸರ ಕಳವಿಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ವಿವೇಕಾನಂದ ನಗರದ ಎಂ.ಎಚ್‌. ಕಾಲೇಜು ಸಮೀಪ ಶನಿವಾರ ಬೆಳಿಗ್ಗೆ ದುಷ್ಕರ್ಮಿಗಳು ಮಹಿಳೆಯೊಬ್ಬರ ಸರ ಕಳವಿಗೆ ಯತ್ನಿಸಿದ್ದಾರೆ.

ಮಹಿಳೆಯು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಇಬ್ಬರು ಆಕೆಯ ಕೊರಳಲ್ಲಿ ಇದ್ದ ಸರಕ್ಕೆ ಕೈ ಹಾಕಿ ಎಳೆದಿದ್ದಾರೆ. ಸರ ತುಂಡಾಗಿದ್ದು, ಒಂದು ಪಾಲಷ್ಟೇ ಕಳ್ಳರ ಕೈ ಸೇರಿದೆ. ಕೂಡಲೇ ಅವರು ಅಲ್ಲಿಂದ ಪರಾರಿಯಾಗಿದ್ದಾರೆ.

ಆರೋಪಿಗಳಿಬ್ಬರು ಮುಖಕ್ಕೆ ಹೆಲ್ಮೆಟ್‌ ಹಾಕಿರಲಿಲ್ಲ. ಅವರ ಚಲನವಲನಗಳು ಸಮೀಪದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಸಾಧ್ಯತೆ ಇದೆ. ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದರು. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು