ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ: ಮನೆಯಿಂದಲೇ ಹಕ್ಕು ಚಲಾಯಿಸಲಿದ್ದಾರೆ 982 ವೃದ್ಧರು, 445 ಅಂಗವಿಕಲರು

Published 10 ಏಪ್ರಿಲ್ 2024, 14:26 IST
Last Updated 10 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ಚಾಮರಾಜನಗರ: ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷಚೇತನ ಮತದಾರರು ಇದೇ 13 ರಿಂದ 18ರವರೆಗೆ ಅಂಚೆ ಮತಪತ್ರದ ಮೂಲಕ ತಮ್ಮ  ಮನೆಯಲ್ಲಿಯೇ ಮತದಾನ ಮಾಡಲಿದ್ದಾರೆ. 

ಕ್ಷೇತ್ರದ ವ್ಯಾಪ್ತಿಯಲ್ಲಿ 982 ಮಂದಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 445 ಮಂದಿ ಅಂಗವಿಕಲ ಮತದಾರರನ್ನು ಗುರುತಿಸಲಾಗಿದ್ದು,  ಇವರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಈ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟೋನ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಚುನಾವಣಾಧಿಕಾರಿಗಳು ಮತ್ತು ಸಿಬ್ಬಂದಿ ಮತದಾರರ ಮನೆಗೆ ತೆರಳಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ನೆರವಾಗಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT