ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಕೆ.ಜಿ ಗಾಂಜಾ ವಶ: ಮಹಿಳೆ ಬಂಧನ

Last Updated 13 ಫೆಬ್ರುವರಿ 2020, 13:38 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಮಂಗಲ ಗ್ರಾಮದ ಜಯಮ್ಮ ಬಂಧಿತ ಆರೋಪಿ. ಈಕೆ ಕಾಡಂಚಿನ ಗ್ರಾಮಗಳು ಮತ್ತು ಪಟ್ಟಣದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪ್ಯಾಕೆಟ್ ಮಾಡಿ ₹ 150ಕ್ಕೆ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿ ಬಂಧಿಸಿ, 2 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಡಿಸಿಆರ್‌ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಎಸ್ಪಿ ಅನಿತಾ ಹದ್ದಣ್ಣವರ್, ಡಿಸಿಆರ್‌ಬಿ ಪಿಐ ಮಹಾದೇವ ಶೆಟ್ಟಿ, ನೌಕರರಾದ ಎಚ್.ಡಿ.ಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT