ಚಾಮರಾಜನಗರ: ನಾಲ್ಕು ವರ್ಷಗಳ ಹಿಂದೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 36 ಮಂದಿಯ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡದಿದ್ದರೆ ಚಾಮರಾಜನಗರ ಜಿಲ್ಲೆ ಬಂದ್ ಮಾಡುವುದಾಗಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮಂಗಳವಾರ ಎಚ್ಚರಿಕೆ ನೀಡಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ, ದಲಿತ, ರೈತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.

‘ಬಂದ್ ಪೂರ್ವಭಾವಿಯಾಗಿ ಜೂನ್ 13ರಂದು ಸಾಂಕೇತಿಕವಾಗಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ ಈಡೇರಿಸದಿದ್ದರೆ ಜಿಲ್ಲೆ ಬಂದ್ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಒಕ್ಕೂಟದ ಮುಖಂಡ ಸಿ.ಎಂ. ಕೃಷ್ಣಮೂರ್ತಿ ತಿಳಿಸಿದರು.

‘ಬೆಂಗಳೂರಿನಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಮೃತಪಟ್ಟವರ ಕುಟುಂಬಗಳಿಗೆ ಹೆಚ್ಚು ಹಾಗೂ ಆಮ್ಲಜನಕ ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಕಡಿಮೆ ಪ್ರಮಾಣದಲ್ಲಿ ಪರಿಹಾರ ನೀಡುತ್ತಿರುವ ನಿರ್ಧಾರ ಖಂಡನೀಯ. ಸಾವಿನಲ್ಲಿ ರಾಜಕೀಯ ಮಾಡದೆ ಏಕರೂಪ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.