ಮಂಗಳವಾರ, ಜೂನ್ 22, 2021
22 °C

ವಿವಾಹಿತನಿಂದ 5 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಹನೂರಿನಲ್ಲಿ ಅಮಾನವೀಯ ಕೃತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು (ಚಾಮರಾಜನಗರ): ತಾಲ್ಲೂಕಿನ ರಾಮಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ವಿವಾಹಿತನೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. 

ಪೈಶಾಚಿಕ ಕೃತ್ಯ ಎಸಗಿರುವ ಬಸವರಾಜು (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಯು ಸೋಮವಾರ ಬೆಳಿಗ್ಗೆ ಮನೆಯ ಬಳಿ ಆಟವಾಡುತ್ತಿದ್ದಾಗ, ಆರೋಪಿಯು ತಿಂಡಿ ಕೊಡಿಸುವುದಾಗಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆ ನಂತರ ಅವಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಬಂದ ಬಾಲಕಿಯು ಜ್ವರ ಹಾಗೂ ಮೈಕೈ ನೋವು ಎಂದು ಮಲಗಿದ್ದಳು. ತಂದೆ ಬಂದು ವಿಚಾರಿಸಿದಾಗ ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದಾಳೆ ಎಂದು ಗೊತ್ತಾಗಿದೆ. ನಂತರ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಡಿವೈಎಸ್‌ಪಿ ನವೀನ್‌ ಕುಮಾರ್ ಹಾಗೂ ಸಿಬ್ಬಂದಿ ಬಾಲಕಿಯನ್ನು ಭೇಟಿ ಮಾಡಿ ಕುಟುಂಬದವರಿಂದ ಮಾಹಿತಿ ಪಡೆದಿದ್ದಾರೆ. ಆರೋಗ್ಯ ತಪಾಸಣೆಗಾಗಿ ಬಾಲಕಿಯನ್ನು ವೈದ್ಯರ ಬಳಿಕ ಕಳುಹಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು