ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು: ಐದರ ಬಾಲೆ ಮೇಲೆ ಅತ್ಯಾಚಾರ

ಹನೂರು: ವಿವಾಹಿತನಿಂದ ಪೈಶಾಚಿಕ ಕೃತ್ಯ
Last Updated 3 ಡಿಸೆಂಬರ್ 2019, 10:54 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ):ತಾಲ್ಲೂಕಿನ ರಾಮಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ವಿವಾಹಿತನೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಪೈಶಾಚಿಕ ಕೃತ್ಯ ಎಸಗಿರುವ ಬಸವರಾಜು (35) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿಯು ಸೋಮವಾರ ಬೆಳಿಗ್ಗೆ ಮನೆಯ ಬಳಿ ಆಟವಾಡುತ್ತಿದ್ದಾಗ, ಆರೋಪಿಯು ತಿಂಡಿ ಕೊಡಿಸುವುದಾಗಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದು ಹೋಗಿದ್ದಾನೆ. ತಿಂಡಿ ನೀಡುವ ನೆಪದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಬಂದ ಬಾಲಕಿಯು ಜ್ವರ ಹಾಗೂ ಮೈಕೈ ನೋವು ಎಂದು ಮಲಗಿದ್ದಳು. ತಂದೆ ಬಂದು ವಿಚಾರಿಸಿದಾಗ ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದಾಳೆ ಎಂದು ಗೊತ್ತಾಗಿದೆ. ನಂತರ, ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಡಿವೈಎಸ್‌ಪಿ ನವೀನ್‌ ಕುಮಾರ್ ಹಾಗೂ ಸಿಬ್ಬಂದಿ ಬಾಲಕಿಯನ್ನು ಭೇಟಿ ಮಾಡಿ ಕುಟುಂಬದವರಿಂದ ಮಾಹಿತಿ ಪಡೆದಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT