ಗುರುವಾರ , ಅಕ್ಟೋಬರ್ 1, 2020
28 °C
ಸೋಂಕಿತರ ಸಂಖ್ಯೆ 851ಕ್ಕೆ, 28 ಮಂದಿ ಗುಣಮುಖ, 291 ಸಕ್ರಿಯ ಪ್ರಕರಣಗಳು

ಚಾಮರಾಜನಗರ: 54 ಕೋವಿಡ್‌ ಪ್ರಕರಣಗಳು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 54 ಮಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಈ ಮೂಲಕ, ಈವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 851ಕ್ಕೆ ಏರಿದೆ.

ಮಂಗಳವಾರ 28 ಮಂದಿ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಇದುವರೆಗೆ 547 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. 291 ಸಕ್ರಿಯ ಪ್ರಕರಣಗಳಿವೆ. ಎಲ್ಲರಿಗೂ ಕೋವಿಡ್‌ ಆಸ್ಪತ್ರೆ/ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 11 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು ದೃಢಪಟ್ಟಿದ್ದರೂ ಬೇರೆ ಕಾರಣಗಳಿಂದಾಗಿ ಇಬ್ಬರು ಅಸುನೀಗಿದ್ದಾರೆ. 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲೆಯಲ್ಲಿ ಮಂಗಳವಾರ 552 ಗಂಟಲು ದ್ರವ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದ್ದು,  ಆರ್‌ಟಿಪಿಸಿಆರ್ ಮೂಲಕ 312, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್‌ ಮೂಲಕ 240 ಪರೀಕ್ಷೆಗಳನ್ನು ನಡೆಸಲಾಗಿದೆ. 23 ಮಂದಿಗೆ ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದರೆ, 31 ಮಂದಿಗೆ ಆ್ಯಂಟಿಜೆನ್‌ ಪರೀಕ್ಷೆಯಲ್ಲಿ ಕೋವಿಡ್‌–19 ಇರುವುದು ಖಚಿತವಾಗಿದೆ. 498 ಮಂದಿಯ ವರದಿ ನೆಗೆಟಿವ್‌ ಬಂದಿದೆ. 

54 ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ 18, ಗುಂಡ್ಲುಪೇಟೆ ತಾಲ್ಲೂಕಿನ 17, ಯಳಂದೂರು ತಾಲ್ಲೂಕಿನ ಎಂಟು, ಕೊಳ್ಳೇಗಾಲ ತಾಲ್ಲೂಕಿನ ಏಳು, ಹನೂರು ತಾಲ್ಲೂಕಿನ ನಾಲ್ವರು ಇದ್ದಾರೆ. 

ಕೊಳ್ಳೇಗಾಲ ತಾಲ್ಲೂಕಿನ 11, ಯಳಂದೂರು ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆ ತಾಲ್ಲೂಕಿನ ಐವರು, ಚಾಮರಾಜನಗರ ತಾಲ್ಲೂಕಿನ ಇಬ್ಬರು, ಹೊರ ಜಿಲ್ಲೆಯ ಇಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು