ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 60 ಹೊಸ ಕೋವಿಡ್‌ ಪ್ರಕರಣ, 84 ಮಂದಿ ಸೋಂಕುಮುಕ್ತ

Last Updated 5 ಅಕ್ಟೋಬರ್ 2020, 14:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 84 ಮಂದಿ ಕೋವಿಡ್‌–19ನಿಂದ ಗುಣಮುಖರಾಗಿದ್ದಾರೆ. 60 ಮಂದಿಗೆ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದಾರೆ.

ನಗರದ 90 ವರ್ಷದ ವೃದ್ಧರೊಬ್ಬರು ಸೆ.30ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 71ಕ್ಕೆ ಏರಿದೆ. 28 ಮಂದಿ ಕೋವಿಡ್‌ಯೇತರ ಕಾರಣದಿಂದ ನಿಧನರಾಗಿದ್ದಾರೆ.

ಸೋಮವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಕೋವಿಡ್‌ ಪ್ರಕರಣಗಳ ಸಂಖ್ಯೆ 4,475 ತಲುಪಿದೆ. 3,518 ಮಂದಿ ಗುಣಮುಖರಾಗಿದ್ದಾರೆ. 858 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 376 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 38 ಮಂದಿ ಐಸಿಯುನಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ/ಕೇರ್‌ ಕೇಂದ್ರದಲ್ಲಿದ್ದಾರೆ.

ಕಡಿಮೆಯಾದ ಪರೀಕ್ಷೆ: ಸೋಮವಾರ 457 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಆರ್‌ಟಿಪಿಸಿಆರ್‌ನಲ್ಲಿ 318, ರ‍್ಯಾಪಿಡ್‌ ಆ್ಯಂಟಿಜೆನ್‌ ಕಿಟ್ ಮೂಲಕ 139 ಪರೀಕ್ಷೆಗಳನ್ನು ನಡೆಸಲಾಗಿದೆ. 398 ವರದಿಗಳು ನೆಗೆಟಿವ್‌ ಬಂದಿದ್ದು, 59 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಒಂದು ಪ್ರಕರಣ ಮೈಸೂರಿನಲ್ಲಿ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ 67,226 ಪರೀಕ್ಷೆಗಳನ್ನು ನಡೆಸಲಾಗಿದ್ದು, 62,828 ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT