ಶುಕ್ರವಾರ, ಮೇ 27, 2022
28 °C

ಹನೂರು: ಕಾಡಾನೆ ದಾಳಿ, ವ್ಯಕ್ತಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು (ಚಾಮರಾಜನಗರ): ತಾಲ್ಲೂಕಿನ ಚಂಗಡಿಯಿಂದ ಕೌದಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ  ಮುನಿವೆಂಕಟೇಗೌಡ ಎಂಬುವವರ ಮೇಲೆ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು ದಾಳಿ‌‌ ನಡೆಸಿ ಗಾಯಗೊಳಿಸಿದೆ.ಚಿಕಿತ್ಸೆಗಾಗಿ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುನಿವೆಂಕಟೇಗೌಡ ಅವರು ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮದಿಂದ ಕೌದಳ್ಳಿಯಲ್ಲಿ ನಡೆಯುವ ಸಂತೆಗೆ ನಡೆದುಕೊಂಡು ಹೋಗುತ್ತಿದ್ದರು. ಕಾಡಿನ ದಾರಿ ಮಧ್ಯೆ, ಒಂಟಿ ಆನೆಯೊಂದು ದಾಳಿ ಮಾಡಿದೆ. ಮುನಿವೆಂಕಟೇಗೌಡ ಅವರ ಬಲಕಾಲು ಮುರಿದಿದೆ. ಸೊಂಟದ ಭಾಗಕ್ಕೂ ಗಾಯವಾಗಿದೆ.ಅವರನ್ನು ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾಡಿನ ಮಧ್ಯೆ ಇರುವ ಈ ಗ್ರಾಮದಲ್ಲಿ ಮೂಲಸೌಕರ್ಯದ ಕೊರತೆ ಒಂದೆಡೆಯಾದರೆ ವನ್ಯಪ್ರಾಣಿಗಳ ಹಾವಳಿ ಇಲ್ಲಿನ ಗ್ರಾಮಸ್ಥರನ್ನು ಹೈರಾಣಾಗಿಸಿದೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು ಅರಣ್ಯದಿಂದ ಹೊರಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಮ್ಮತಿಸಿರುವ ಅರಣ್ಯ ಇಲಾಖೆ ಪುನರ್ವಸತಿ ಕಲ್ಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಆದರೆ, ವರದಿ ಸಲ್ಲಿಸಿ ಆರು ತಿಂಗಳಾದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು