ಯಳಂದೂರು: ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ತಾಲ್ಲೂಕಿನ ಯುವಕನೊಬ್ಬನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿ ಈಚೆಗೆ ಗರ್ಭಿಣಿಯಾಗಿದ್ದು ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಬಾಲಕಿಯು ಮಗುವಿಗೆ ಜನ್ಮ ನೀಡಿದ್ದಳು. ಆಸ್ಪತ್ರೆಯ ಸಿಬ್ಬಂದಿ ದೂರಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
‘ಯುವತಿಗೆ ಸದ್ಯ 18 ವರ್ಷ ತುಂಬಿದ್ದರೂ ನಿಗದಿತ ವಯಸ್ಸಿಗೂ ಮೊದಲೇ ವಿವಾಹವಾಗಿರುವುದರಿಂದ ಯುವಕನ ಮೇಲೆ ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಆರ್.ಶ್ರೀಕಾಂತ್ ತಿಳಿಸಿದ್ದಾರೆ.