ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟಿ: ಜನವಸತಿ ಬಳಿ ಹುಲಿ ಪ್ರತ್ಯಕ್ಷ

Last Updated 4 ನವೆಂಬರ್ 2022, 20:39 IST
ಅಕ್ಷರ ಗಾತ್ರ

ಗುಂಡ್ಲುಪೇಟೆ (ಚಾಮರಾಜನಗರ): ನೆರೆಯ ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ಊಟಿಯಲ್ಲಿರುವ ಹಿಂದೂಸ್ತಾನ್‌ ಫೋಟೊ ಫಿಲ್ಮ್ಸ್‌ ಬಳಿ ಹುಲಿಯೊಂದು ಹಸುವನ್ನು ಬೇಟೆಯಾಡಿದೆ.

ಇಲ್ಲಿಂದ ಕೂಗಳತೆ ದೂರದಲ್ಲಿರುವ ಇಂದುನಗರ ಎಂಬ ಜನವಸತಿ ‍ಪ್ರದೇಶದಲ್ಲಿ ಹುಲಿಯು ಹಸುವಿನ ಕಳೇಬರದ ಬಳಿ ನಿಂತಿರುವ ದೃಶ್ಯವನ್ನು ಸ್ಥಳೀಯ ನಿವಾಸಿಗಳು ಗುರುವಾರ
ಬೆಳಿಗ್ಗೆ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹುಲಿಯು ಬುಧವಾರ ಹುಲ್ಲುಗಾವಲಿನಲ್ಲಿ ಮೇಯುತ್ತಿದ್ದ ಹಸುವನ್ನು ಬೇಟೆಯಾಡಿರಬಹುದು ಎಂದು ಶಂಕಿಸಲಾಗಿದೆ. ಫೋಟೊ ಫಿಲ್ಮ್ಸ್‌ ಪ್ರದೇಶ ಪ್ರವಾಸಿ ತಾಣವಾಗಿದ್ದು, ಸಾವಿರಾರು ಪ್ರವಾಸಿಗರು ಪ್ರತಿ ದಿನ ಭೇಟಿ ನೀಡುತ್ತಾರೆ. ‘ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಊಟಿಗೆ ಬರುವವರು ಎಚ್ಚರಿಕೆ ವಹಿಸಬೇಕು’ ಎಂದು ಸ್ಥಳೀಯರು ಕೋರಿದ್ದಾರೆ.

ಊಟಿಯ ಬಹುತೇಕ ಪ್ರವಾಸಿತಾಣಗಳು ಅರಣ್ಯಕ್ಕೆ ಹೊಂದಿಕೊಂಡಿವೆ. ಆದ್ದರಿಂದ, ಕಾಡೆಮ್ಮೆ, ಚಿರತೆ, ಆನೆಗಳು ಆಗಾಗ್ಗೆ ಪ್ರವಾಸಿ ತಾಣದ ವಸತಿ ಪ್ರದೇಶದ ಬಳಿ ಕಾಣಿಸಿಕೊಳ್ಳುತ್ತಿರುತ್ತವೆ. ಆದರೆ, ಹುಲಿ ಕಾಣಿಸಿಕೊಂಡಿರಲಿಲ್ಲ. ಇದೇ ವರ್ಷದ ಜುಲೈನಲ್ಲಿ ಈ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು ವರದಿಯಾಗಿತ್ತು. ಆದರೆ, ಬೇಟೆಯಾಡಿದ ಪ್ರಕರಣ ವರದಿಯಾಗಿರಲಿಲ್ಲ.

‘ಆ ಹುಲಿಯನ್ನು ಸೆರೆಹಿಡಿಯಬೇಕು; ನಮ್ಮಲ್ಲಿ ಮನೆ ಮಾಡಿರುವ ಆತಂಕ ನಿವಾರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆಯು ಹುಲಿಯ ಚಲನ
ವಲನಗಳ ಮೇಲೆ ನಿಗಾ ಇಟ್ಟಿದ್ದು, ಅದಕ್ಕಾಗಿ ವಿಶೇಷ ತಂಡವನ್ನು ರಚಿಸಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT