ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿಯೊಂದು ಬಿಸಿಲಿನ ಝಳ ತಾಳಲಾರದೆ ಕೆರೆಗೆ ಇಳಿದು ಮೈ ತಣಿಸಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯವು ಸಂಪೂರ್ಣ ಒಣಗಿ ಬೋಳಾಗಿ ನಿಂತಿದೆ. ತಾಪಮಾನ ಹೆಚ್ಚಿರುವ ಕಾರಣ ಬಿಸಿಲು ನೆತ್ತಿ ಸುಡುತ್ತಿದ್ದು, ಬಂಡೀಪುರದ ಹಲವು ಕೆರೆ-ಕಟ್ಟೆಗಳಲ್ಲಿ ನೀರು ಕಡಿಮೆಯಾಗುತ್ತ ಬಂದಿದೆ. ಈ ಮಧ್ಯೆ, ಹುಲಿರಾಯ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಕೆರೆಗೆ ಇಳಿದಿತ್ತು.

ಈ ದೃಶ್ಯವನ್ನು ಬಂಡೀಪುರಕ್ಕೆ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಸೆರೆ ಹಿಡಿದು ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.