ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಳ್ಳೇಗಾಲ: ಯುವ ರೈತ ಏಕಾಂಗಿ ಪ್ರತಿಭಟನೆ

Published 23 ಫೆಬ್ರುವರಿ 2024, 13:33 IST
Last Updated 23 ಫೆಬ್ರುವರಿ 2024, 13:33 IST
ಅಕ್ಷರ ಗಾತ್ರ

ಕೊಳ್ಳೇಗಾಲ: ರೈತರ ದೆಹಲಿ ಚಲೋ ಪ್ರತಿಭಟನೆ ವೇಳೆ ರೈತರಿಗೆ ತೊಂದರೆ ಹಾಗೂ ಹಿಂಸಾಚಾರವನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘದ ಹೊಸ ಅಣಗಳ್ಳಿ ಘಟಕದ ಅಧ್ಯಕ್ಷ ಕೀರ್ತಿರಾಜ್ ಏಕಾಂಗಿ ಪ್ರತಿಭಟನೆ ನಡೆಸಿದರು.

ನಗರದ ಹೊಸ ಅಣಗಳ್ಳಿ ಬಡಾವಣೆ ಮನೆಯಲ್ಲಿ ಕೀರ್ತಿರಾಜ್ ಮನೆ ಮುಂದೆ ಕುಳಿತು ಏಕಾಂಗಿ ಹೋರಾಟ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಅವರು,‘ಕೇಂದ್ರ ಸರ್ಕಾರದವರು ನಿರಂತರವಾಗಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಜೊತೆಗೆ ರೈತರಿಗೆ ಕಿರುಕುಳ ಕೊಟ್ಟು ರೈತರನ್ನು ಸಾಯಿಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ. ಹಾಗಾಗಿ ಕೇಂದ್ರ ಸರ್ಕಾರ ರೈತರ ಕಷ್ಟಗಳನ್ನು ಪರಿಹರಿಸಬೇಕು. ಮುಖ್ಯವಾಗಿ ಸ್ವಾಮಿನಾಥನ್ ವರದಿ ಜಾರಿಯಾಗಬೇಕು‌. ಕನಿಷ್ಠ ಬೆಂಬಲ ಬೆಲೆ ಸೇರಿ ರೈತರ 15ಕ್ಕೂ ಹೆಚ್ಚು ಹಕ್ಕೋತರ ಕೂಡಲೇ ಜಾರಿ ಮಾಡಬೇಕು. ರೈತ ಈ ದೇಶದ ಬೆನ್ನೆಲುಬು. ಆದರೆ ರೈತರನ್ನು ಕಡೆಗಣಿಸುತ್ತಿರುವುದು ನಿಜಕ್ಕೂ ದುರಂತದ ವಿಷಯ. ಹಾಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ರೈತರ ಸಂಕಷ್ಟ ಕೂಡಲೇ ಪರಿಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೋರಾಟ ನಡೆಯುತ್ತದೆ’ ಎಂದರು.

‘ಏಕಾಂಗಿ ಹೋರಾಟ ಮಾಡುತ್ತಿರುವ ಕಾರಣವೆಂದರೆ ಪ್ರತಿಯೊಂದು ಮನೆ ಮನೆಗಳಲ್ಲೂ ಸಹ ಏಕಾಂಗಿ ಹೋರಾಟ ಮಾಡಬೇಕು. ಆಗ ಸರ್ಕಾರಕ್ಕೆ ರೈತರು ಏನು ಎಂಬುದು ತಿಳಿಯುತ್ತದೆ. ರೈತರು ದೇಶದಾದ್ಯಂತ ಒಗ್ಗಟ್ಟು ಶಕ್ತಿ ಪ್ರದರ್ಶನ ಮಾಡಿದರೆ, ಸರ್ಕಾರದ ಸ್ಥಿತಿ ಹೇಳಲು ಸಾಧ್ಯವಿಲ್ಲ. ನನ್ನ ಏಕಾಂಗಿ ಹೋರಾಟಕ್ಕೆ ಮೂಲ ಕಾರಣ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ ಹಾಗೂ ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್ ಅವರೇ ಸ್ಫೂರ್ತಿ. ಆ ಕಾರಣ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ’ ಎಂದು ಎಚ್ಚರ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT