ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ನಡೆದ ಎಸ್ಸಿ/ಎಸ್ಟಿ ಹಿತರಕ್ಷಣಾ ಸಮಿತಿ ಸಭೆಗೆ ಕೆಲ ಇಲಾಖೆಯ ಅಧಿಕಾರಿಗಳು ಗೈರಾದ ಕಾರಣ ಮುಖಂಡರ ಆಕ್ರೋಶದ ನಂತರ ಸಭೆ ಮುಂದೂಡಲಾಯಿತು.

ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆ ಆರಂಭದಲ್ಲಿ ಮುಖಂಡರು ಹಿಂದಿನ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಜರುಗಿಸಿರುವ ಶಿಸ್ತು ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರು. ಈ ವೇಳೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದ ಕಾರಣ ಆಕ್ರೋಶ ಹೊರಹಾಕಿದರು.

‘ಪ್ರತಿ ಸಭೆಗೂ ಅಂಬೇಡ್ಕರ್ ನಿಗಮದ ಅಧಿಕಾರಿ ಗೈರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಮುಖಂಡರು, ಮುಂದಿನ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಕರೆಸಬೇಕು. ಜೊತೆಗೆ ಕಡ್ಡಾಯವಾಗಿ ಅಂಬೇಡ್ಕರ್ ನಿಗಮದವರು ಸಭೆಗೆ ಹಾಜರಾಗಬೇಕು. ಈ ಬಗ್ಗೆ ತಹಶೀಲ್ದಾರ್ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹಾಜರಿದ್ದ ಎಸ್ಸಿ, ಎಸ್ಟಿ ಸಮುದಾಯದ ಮುಖಂಡರ ಒತ್ತಾಯದ ಮೇರೆಗೆ ತಹಶೀಲ್ದಾರ್ ಟಿ.ರಮೇಶ್ ಬಾಬು ಜ. 8ಕ್ಕೆ ಸಭೆ ಮುಂದೂಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಷಣ್ಮುಗ, ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸದಸ್ಯ ಕೆಂಪರಾಜು, ಪೊಲೀಸ್ ಇನ್ಸ್ಪೆಕ್ಟರ್ ಪರಶಿವಮೂರ್ತಿ, ಪುರಸಭಾ ಮುಖ್ಯಾಧಿಕಾರಿ ವಸಂತಕುಮಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎಸ್ಸಿ, ಎಸ್ಟಿ ಸಮುದಾಯದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.