ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮ ಲೆಕ್ಕಾಧಿಕಾರಿಗೆ ನಿಂದನೆ: 3 ವರ್ಷ ಜೈಲು

Published : 22 ಆಗಸ್ಟ್ 2024, 16:18 IST
Last Updated : 22 ಆಗಸ್ಟ್ 2024, 16:18 IST
ಫಾಲೋ ಮಾಡಿ
Comments

ಗುಂಡ್ಲುಪೇಟೆ: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಗ್ರಾಮ ಲೆಕ್ಕಾಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವ್ಯಕ್ತಿಗೆ ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಗುಂಡ್ಲುಪೇಟೆ ತಾಲ್ಲೂಕಿನ ವಡೆಯನಪುರ ಗ್ರಾಮದ ಶ್ರೀಕಂಠಸ್ವಾಮಿ ಎಂಬವರೇ ಶಿಕ್ಷೆಗೊಳಗಾದವರು. 2018ರ ಆ. 1ರಂದು ಬೊಮ್ಮಲಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀಕಂಠಸ್ವಾಮಿ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.

ಈ ಬಗ್ಗೆ ಬಸವರಾಜು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬಗ್ಗೆ ವಾದ-ಪ್ರತಿವಾದ ನಡೆದು ನಿಂದನೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಜೆ. ಶಿವಕುಮಾರ್ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ, ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT