ಗುಂಡ್ಲುಪೇಟೆ: ಲಾರಿ ಡಿಕ್ಕಿ, ಅರಣ್ಯ ಇಲಾಖೆ ಸಿಬ್ಬಂದಿ ಸಾವು
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಸ್ತೆ ಬದಿ ನಿಂತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ರೆಹಮತ್ ಉಲ್ಲಾ (35) ಎಂಬುವರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಶುಕ್ರವಾರ ಮೃತಪಟ್ಟಿದ್ದಾರೆ.
ಇಲಾಖೆಯಲ್ಲಿ ಚಾಲಕ, ನೀರುಗಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ನೀರಿನ ಮೋಟರ್ ಚಾಲನೆ ಮಾಡಿ ಬೈಕ್ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ, ಆಂಧ್ರಪ್ರದೇಶ ನೋಂದಣಿ ಸಂಖ್ಯೆ ಹೊಂದಿರುವ ಸಿಮೆಂಟ್ ತುಂಬಿದ ಲಾರಿಯು ಗುದ್ದಿದ್ದು, 200 ಮೀ.ನಷ್ಟು ದೂರ ಎಳೆದೊಯ್ದಿದೆ.
ಗುಂಡ್ಲುಪೇಟೆ ಪೊಲೀಸರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಎಫ್‌ಒ ಬಾಲಚಂದ್ರ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.