ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಾವು

Published 28 ಜೂನ್ 2024, 15:58 IST
Last Updated 28 ಜೂನ್ 2024, 15:58 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ-67ರ ಬಸವಾಪುರ ಬಳಿ ಶುಕ್ರವಾರ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ   ಡಿಕ್ಕಿ ಸಂಭವಿಸಿ, ಆಹಾರ ನಿರೀಕ್ಷಕ ನಾಗೇಂದ್ರಪ್ಪ(46) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ   ಶಿರಸ್ತೇದಾರ್ ರಮೇಶ್(52) ತೀವ್ರವಾಗಿ ಗಾಯಗೊಂಡಿದ್ದಾರೆ.   

ಹಂಗಳ ಗ್ರಾಮದಲ್ಲಿ ನಡೆದ ಜನಸ್ಪಂದನದಲ್ಲಿ ಭಾಗವಹಿಸಿ ಇವರು ಮರಳುತ್ತಿದ್ದರು. ಅಪಘಾತ ಸಂಭವಿಸಿದ ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ನಾಗೇಂದ್ರಪ್ಪ ಮೃತಪಟ್ಟಿರುವುದನ್ನು ಪರೀಕ್ಷಿದ ವೈದ್ಯರು ದೃಢಪಡಿಸಿದರು. ಮೃತದೇಹವನ್ನು  ಶವಗಾರದಲ್ಲಿ ಇರಿಸಲಾಗಿದೆ. ಆಹಾರ ನಿರೀಕ್ಷಕ ರಮೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ.

ಪೊಲೀಸ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ, ಪಿಎಸ್‍ಐ ಎಂ.ಎಸ್.ಶಿವಶಂಕರಪ್ಪ, ಜಯರಾಂ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT