ಬುಧವಾರ, ಅಕ್ಟೋಬರ್ 23, 2019
23 °C

ಕೊಳ್ಳೇಗಾಲ | ಗೂಡ್ಸ್ ಆಟೊ ಪಲ್ಟಿ: 12 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

Published:
Updated:

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮತ್ತೀಪುರ ಗ್ರಾಮದ ಬಳಿಯ ಕ್ರಾಸ್‌ನಲ್ಲಿ ಗೂಡ್ಸ್ ಆಟೊ ಉರುಳಿ ಬಿದ್ದು 12 ಕೂಲಿ ಕಾರ್ಮಿಕ ಮಹಿಳೆಯರು ಗಾಯಗೊಂಡಿದ್ದಾರೆ.

ಐವರ ಪರಿಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ‌ ಕರೆದುಕೊಂಡು ಹೋಗಲಾಗಿದೆ. ಉಳಿದವರಿಗೆ ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ದುರ್ಘಟನೆಯಲ್ಲಿ‌ ಮಹಿಳೆಯೊಬ್ಬರ ಬೆರಳುಗಳು ತುಂಡಾಗಿವೆ.

ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಸ್ಥಳಳಕ್ಕೆ ಗ್ರಾಮಾಂತರ ರಾಣಾ ಪಿ.ಎಸ್.ಸಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಉರುಳಿಬಿದ್ದಿರುವ ಆಟೊ

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)