ಭಾನುವಾರ, ಜುಲೈ 25, 2021
28 °C

ಮದುವೆ ಮುಗಿಸಿಕೊಂಡು ಬರುತ್ತಿದ್ದಾಗ ವಾಹನ ಪಲ್ಟಿ: ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು (ಚಾಮರಾಜನಗರ): ಮದುವೆ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ತಾಲ್ಲೂಕಿನ ಕೊರಮನಕತ್ತರಿ ಜೆ. ವಿಲೇಜ್ ಬಳಿ ಬೊಲೆರೊ ಪಿಕ್‌ಅಪ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಹುಣಸೆಪಾಳ್ಯದ ಚಿಕ್ಕಸಿದ್ದಮ್ಮ (55), ನಂಜುಂಡಯ್ಯ (60), ಸೀಮೆಎಣ್ಣೆ ನಾಗ (55) ಮೃತರು.

ಮಧುವನಹಳ್ಳಿಯಲ್ಲಿ ಸಂಬಂಧಿಕರ ಮದುವೆಗೆಂದು ತೆರಳಿದ್ದ ಹುಣಸೇಪಾಳ್ಯದ ಹಲವರು ವಾಪಸ್‌ ಬರುತ್ತಿದ್ದರು. ಕೊರಮನಕತ್ತರಿ ಜೆ. ವಿಲೇಜ್‌ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ.

ಗಾಯಾಳುಗಳ ಪೈಕಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಒಡೆಯರಪಾಳ್ಯ, ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು