ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 200 ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

Last Updated 9 ಏಪ್ರಿಲ್ 2021, 16:19 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 29 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 11 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 204ಕ್ಕೆ ಏರಿದೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 7,287ಕ್ಕೆ ಏರಿದೆ. 6951 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ 204 ಮಂದಿಯಲ್ಲಿ 158 ಜನರು ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 1,028 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 999 ವರದಿಗಳು ನೆಗೆಟಿವ್‌ ಬಂದಿವೆ. ಸೋಂಕು ದೃಢಪಟ್ಟ 29 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 12, ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲ, ಹನೂರು ಮತ್ತು ಯಳಂದೂರು ತಾಲ್ಲೂಕುಗಳ ತಲಾ ನಾಲ್ವರು ಇದ್ದಾರೆ.

ಮತ್ತೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು: ತಾಲ್ಲೂಕಿನ ಹರದನಹಳ್ಳಿಯ ಬಳಿ ಇರುವ ಕೃಷಿ ಕಾಲೇಜಿನಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 17ಕ್ಕೆ ಏರಿದೆ.

‘ಎಲ್ಲರೂ ಹಾಸ್ಟೆಲ್‌ನಲ್ಲಿದ್ದು, ಆರೋಗ್ಯವಾಗಿದ್ದಾರೆ. ನೆಗೆಟಿವ್‌ ವರದಿ ಬಂದಿರುವ ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ. ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಔಷಧ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ಕಾಲೇಜಿನ ವಿಶೇಷ ಅಧಿಕಾರಿ ಡಾ.ಎಂಪಿ.ರಾಜಣ್ಣ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಎರಡನೇ ದಿನವೂ ದೇವಸ್ಥಾನ ಬಂದ್: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ಅರ್ಚಕರು ಹಾಗೂ ಇತರರಿಗೆ ಸೋಂಕು ದೃಢಪಟ್ಟಿರುವುದರಿಂದ ಸತತ ಎರಡನೇ ದಿನವಾದ ಶುಕ್ರವಾರವೂ ದೇವಾಲಯಕ್ಕೆ ಬೀಗ ಹಾಕಲಾಗಿತ್ತು. ರಂಗನಾಥಸ್ವಾಮಿಗೆ ಪೂಜೆ ನಡೆಯಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT