ಮಂಗಳವಾರ, ಅಕ್ಟೋಬರ್ 26, 2021
20 °C

ಚಾಮರಾಜನಗರ: 23ಕ್ಕೆ ಇಳಿದ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ ಮೂರು ಹೊಸ ಕೋವಿಡ್‌ ಪ್ರಕರಣ ದೃಢಪಟ್ಟಿದೆ. ಏಳು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 23ಕ್ಕೆ ಇಳಿದಿದೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಹೋಂ ಐಸೊಲೇಷನ್‌ನಲ್ಲಿ 16 ಮಂದಿ ಇದ್ದಾರೆ. 

ಜಿಲ್ಲೆಯ ಪ್ರಕರಣಗಳ ಸಂಖ್ಯೆ 32,519ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 31,959ಕ್ಕೆ ಹಿಗ್ಗಿದೆ. 

ಶನಿವಾರ 1,495 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,492 ವರದಿಗಳು ನೆಗೆಟಿವ್‌ ಬಂದಿವೆ. ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಹನೂರು ತಾಲ್ಲೂಕುಗಳ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು