ಒಂದಂಕಿಗೆ ಇಳಿದ ಸಕ್ರಿಯ ಪ್ರಕರಣ

ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣ ವರದಿಯಾಗಿಲ್ಲ. ನಾಲ್ವರು ಗುಣಮುಖರಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿರುವ ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ.
ಎರಡನೇ ಅಲೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 10ರೊಳಕ್ಕೆ ಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ ಏಳು ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿದ್ದು, ಆರು ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ 942 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದೆ. ಎಲ್ಲರ ವರದಿಗಳೂ ನೆಗೆಟಿವ್ ಆಗಿವೆ.
ಜಿಲ್ಲೆಯಲ್ಲಿ ಇದುವರೆಗೆ 32,560 ಪ್ರಕರಣ ವರದಿಯಾಗಿವೆ. ಗುಣಮುಖರಾದವರ ಸಂಖ್ಯೆ 32,014ಕ್ಕೆ ಏರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.