ಭಾನುವಾರ, ಏಪ್ರಿಲ್ 11, 2021
32 °C

ಚಾಮರಾಜನಗರ: ಮತ್ತೆ ಎರಡಂಕಿ ದಾಟಿದ ಸಕ್ರಿಯ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಎರಡಂಕಿ ದಾಟಿದೆ. ದೃಢಪಡುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ.

ಶುಕ್ರವಾರ ನಾಲ್ಕು ಮಂದಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದ್ದರೆ, ಶನಿವಾರ ಐವರು ಕೋವಿಡ್‌ಗೆ ತುತ್ತಾಗಿರುವುದು ಖಚಿತವಾಗಿದೆ. ಶುಕ್ರವಾರ ಹಾಗೂ ಶನಿವಾರ ತಲಾ ಇಬ್ಬರು ಸೋಂಕು ಮುಕ್ತರಾಗಿದ್ದಾರೆ. 

ಸಕ್ರಿಯ ಪ್ರಕರಣಗಳ ಸಂಖ್ಯೆ ಶುಕ್ರವಾರ ಒಂಬತ್ತು ಇತ್ತು. ಅದೀಗ 12ಕ್ಕೆ ತಲುಪಿದೆ. ಈ ಪೈಕಿ ಆರು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಜಿಲ್ಲೆಯಲ್ಲಿ ಇದುವರೆಗೆ 6,947 ಪ್ರಕರಣಗಳು ದೃಢಪಟ್ಟಿದ್ದು, 6,803 ಮಂದಿ ಗುಣಮುಖರಾಗಿದ್ದಾರೆ. 112 ಮಂದಿ ಕೋವಿಡ್‌ನಿಂದ ಹಾಗೂ 20 ಮಂದಿ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆ. 

ಶನಿವಾರ 979 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 974 ಮಂದಿ ವರದಿ ನೆಗೆಟಿವ್‌ ಬಂದಿವೆ. ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ತಲಾ ಇಬ್ಬರು ಹಾಗೂ ಹನೂರು ತಾಲ್ಲೂಕಿನ ಒಬ್ಬರು ಸೇರಿದಂತೆ ಐವರಿಗೆ ಸೋಂಕು ತಗುಲಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು