ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 1,057 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ಹಾಗೂ ಹನೂರಿನ ತಲಾ ಒಬ್ಬರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ನಾಲ್ವರುಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 18ಕ್ಕೆ ಕುಸಿದಿದೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಹೋಂ ಐಸೊಲೇಷನ್‌ನಲ್ಲಿರುವವರ ಸಂಖ್ಯೆ 11ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಇದುವರೆಗೆ 32,523 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 31,967 ಮಂದಿ ಸೋಂಕುಮುಕ್ತರಾಗಿದ್ದಾರೆ.

ಲಸಿಕಾ ಮೇಳ: ಜಿಲ್ಲೆಯಲ್ಲಿ ಭಾನುವಾರದಿಂದಲೇ ಕೋವಿಡ್ ಲಸಿಕಾ ಮೇಳ ಆರಂಭವಾಗಿದ್ದು, ಇದೇ 14ರವರೆಗೆ ಮುಂದುವರೆಯಲಿದೆ. ಭಾನುವಾರ 7398 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 373 ಮಂದಿ ಮೊದಲ ಡೋಸ್ ಪಡೆದಿದ್ದರೆ, 7,025 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಸೋಮವಾರವೂ ಲಸಿಕಾ ಮೇಳ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.