ಗುರುವಾರ , ಜುಲೈ 29, 2021
23 °C

ಸಕ್ರಿಯ ಪ್ರಕರಣ 468ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 41 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 51 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 468ಕ್ಕೆ ಇಳಿದಿದೆ. ಸೋಂಕಿತರ ಪೈಕಿ 27 ಮಂದಿ ಐಸಿಯುನಲ್ಲಿ ಹಾಗೂ 20 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,232ಕ್ಕೆ ಏರಿದೆ. 30,255 ಮಂದಿ ಗುಣಮುಖರಾಗಿದ್ದಾರೆ.

ಗುರುವಾರ 1,724 ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬಂದಿದ್ದು, 1682 ವರದಿಗಳು ನೆಗೆಟಿವ್ ಬಂದಿವೆ. 42 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾಡಳಿತವು ತನ್ನ ವರದಿಯಲ್ಲಿ 41 ಪ್ರಕರಣಗಳನ್ನು ಉಲ್ಲೇಖಿಸಿದೆ.  

41 ಮಂದಿ ಸೋಂಕಿತರಲ್ಲಿ 19 ಮಂದಿ ಚಾಮರಾಜನಗರ ತಾಲ್ಲೂಕಿನವರು. ಗುಂಡ್ಲುಪೇಟೆಯ ಐವರು, ಕೊಳ್ಳೇಗಾಲದ ಆರು, ಹನೂರಿನ ಐವರು ಹಾಗೂ ಯಳಂದೂರು ತಾಲ್ಲೂಕಿನ ಆರು ಮಂದಿ ಇದ್ದಾರೆ. 

ಚಾಮರಾಜನಗರ ತಾಲ್ಲೂಕಿನ ಒಂಬತ್ತು, ಗುಂಡ್ಲುಪೇಟೆಯ 10, ಕೊಳ್ಳೇಗಾಲದ 11, ಹನೂರಿನ 18, ಯಳಂದೂರು ತಾಲ್ಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿ 51 ಮಂದಿ ಗುಣಮುಖರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.