ಗುಂಡ್ಲುಪೇಟೆ: ತಂಬಾಕು ಸೇವನೆ ಮಾಡಿದರೆ ಕ್ಯಾನ್ಸರ್ಗೆ ಆಹ್ವಾನ ನೀಡಿದಂತೆ. ಆದ್ದರಿಂದ ಸಾರ್ವಜನಿಕರು ತಂಬಾಕಿನಿಂದ ದೂರವಿರಬೇಕು ಎಂದು ಸಾಹಿತಿ ಕಾಳಿಂಗಸ್ವಾಮಿ ಸಿದ್ಧಾರ್ಥ್ ಸಲಹೆ ನೀಡಿದರು.

ತಾಲ್ಲೂಕಿನ ಬಸವಾಪುರ ವಲಯದ ಕಗ್ಗಳದಲ್ಲಿ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ‘ವಿಶ್ವ ತಂಬಾಕು ವಿರೋಧಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಂಬಾಕು ಸೇವನೆ, ಮದ್ಯಪಾನ, ಮಾದಕ ವಸ್ತುಗಳ ಸೇವನೆಯಿಂದ ರಕ್ತಹೀನತೆ ಉಂಟಾಗಿ ಶ್ವಾಸಕೋಶ, ಕರುಳು ರೋಗಗಳಿಗೆ ಬಲಿಯಾಗಬೇಕಾಗುತ್ತದೆ’ ಎಂದು ತಿಳಿಸಿದರು.

‘ತಂಬಾಕು ಸೇವನೆ ಇತರೆ ವ್ಯಕ್ತಿಗಳಿಗೂ ಮಾರಕವಾಗಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಆದ್ದರಿಂದ ದುಶ್ಚಟಗಳನ್ನು ಮೆಟ್ಟಿ ನಿಂತು ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಬೇಕು. ಜೊತೆಗೆ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು’ ಎಂದು ಹೇಳಿದರು.

ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಮಂಜುನಾಥ, ಸೇವಾ ಪ್ರತಿನಿಧಿಗಳು, ಆಶಾ ಕಾರ್ಯಕರ್ತರು, ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.