ಬುಧವಾರ, ಆಗಸ್ಟ್ 12, 2020
21 °C

ಹಾವು ಕಡಿದು ಕೃಷಿ ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂತೇಮರಹಳ್ಳಿ: ಹೋಬಳಿಯ ನವಿಲೂರು ಗ್ರಾಮದ ಗಣಗನೂರು ಎಂಬ ಪ್ರದೇಶದ ತೋಟವೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ನಾಗರಹಾವು ಕಚ್ಚಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ನವಿಲೂರು ಗ್ರಾಮದ ನಿವಾಸಿ ಮಲ್ಲಣ್ಣ (47) ಮೃತಪಟ್ಟವರು. ಗಣಗನೂರು ಸಂತೇ ಮಾಳದ ಹತ್ತಿರ ಬೆಂಗಳೂರಿನ ಅಶೋಕ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮಲ್ಲಣ್ಣ ಅವರು ಎಂದಿನಂತೆ ಬೆಳಗ್ಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹಾವು ಕಚ್ಚಿದೆ. ತಕ್ಷಣ ಅವರನ್ನು ಕಾಮಗೆರೆ ಹೋಲಿಕ್ರಾಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮಧ್ಯೆಯಲ್ಲಿ ಮೃತಪಟ್ಟರು ಎಂದು ಗೊತ್ತಾಗಿದೆ. 

ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ನಡೆಯಿತು. ಕುದೇರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು