ಮಂಗಳವಾರ, ನವೆಂಬರ್ 24, 2020
27 °C

ಜನವರಿ ಒಳಗೆ ಎಲ್ಲ ಕೆರೆಗಳಿಗೆ ನೀರು: ಸಚಿವ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜನವರಿ ತಿಂಗಳ ಒಳಗಾಗಿ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಎಲ್ಲ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರು ಹೇಳಿದರು. 

ಕೆರೆ ನೀರು ತುಂಬಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಶಾಸಕರು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೀರು ಹರಿಸಲು ಇನ್ನೂ 77 ದಿನಗಳ ಅವಕಾಶ ಇದೆ. ಎರಡು ಮೋಟಾರ್‌ಗಳು ಕೆಟ್ಟುಹೋಗಿದ್ದರಿಂದ ಸ್ವಲ್ಪ ಸಮಸ್ಯೆ ಆಗಿತ್ತು. ಈಗ ಅದು ಬಗೆಹರಿದಿದೆ’ ಎಂದರು. 

ಮೂರನೇ ಹಂತದ ಯೋಜನೆಯ ಕೆರೆಗಳನ್ನು ಬಿಟ್ಟು ನಾಲ್ಕನೇ ಹಂತದ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ, ಬಿಜೆಪಿ ಶಾಸಕರ ಕ್ಷೇತ್ರದ ಕೆರೆಗಳಿಗೆ ಮಾತ್ರ ನೀರು ಹರಿಯುತ್ತಿದೆ ಎಂಬ ಆರೋಪಗಳ ಬಗ್ಗೆ ಕೇಳಿದ್ದಕ್ಕೆ, ‘ಕುಡಿಯುವ ನೀರಿನ ಉದ್ದೇಶಕ್ಕೆ ಕೆರೆಗಳಿಗೆ ನೀರು ತುಂಬಿಸುವುಕ್ಕೆ ಯಾವ ದೊಣೆ ನಾಯಕನ ಅಪ್ಪಣೆಯೂ ಬೇಕಾಗಿಲ್ಲ. ನಿಯಮದ ಪ್ರಕಾರವೇ ಕೆರೆಗಳಿಗೆ ನೀರು ಹರಿಸಲಾಗುವುದು’ ಎಂದು ಅವರು ಉತ್ತರಿಸಿದರು.

‘ಮೊದಲ ಮತ್ತು ಎರಡನೇ ಹಂತದ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳು ಈ ತಿಂಗಳಾಂತ್ಯದಲ್ಲಿ ತುಂಬಲಿವೆ. ಉಳಿದ ಎರಡು ಹಂತದ ಯೋಜನೆಗಳ ಕೆರೆಗಳಿಗೆ ನಂತರ ತುಂಬಿಸಲಾಗುವುದು. ಜನವರಿ ಒಳಗೆ ಎಲ್ಲ ಕೆರೆಗಳು ಭರ್ತಿಯಾಗಲಿವೆ’ ಎಂದು ಸುರೇಶ್‌ ಕುಮಾರ್ ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು