ಚಾಮರಾಜನಗರ: ' ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಮ್ಲಜನಕ ಇಲ್ಲದೆ 36 ಜನರು ಸತ್ತರು. ಅವರ ಸಾವಿಗೆ ಸುಧಾಕರ್ ಕಾರಣ. 36 ಜನರು ಮೃತಪಟ್ಟರೂ ಮೂವರು ಮೃತಪಟ್ಟರು ಎಂದು ಸುಳ್ಳು ಹೇಳಿದ್ದರು. ಸಚಿವರಾಗಲು ಆತ ಲಾಯಕ್ಕಿಲ್ಲ' ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿದರು.

'ಕೋವಿಡ್ ಸಮಯದಲ್ಲಿ ಹಗರಣ ನಡೆದಿಲ್ಲ. ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿ' ಎಂದು ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನೀಡಿರುವ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,'ಆತ ನೇಣುಹಾಕಿಕೊಳ್ಳುವುದೇನೂ ಬೇಡ. ಬದುಕಿರಲಿ.

ಮೊದಲು ಹಗರಣದ ಬಗ್ಗೆ ತನಿಖೆ ಮಾಡಲಿ. ಅವರ ಮೇಲಿನ ಆರೋಪಗಳು ಸಾಬೀತಾಗುತ್ತವೆ. ರಾಜ್ಯ ಹಾಗೂ ಕೇಂದ್ರದಲ್ಲಿ ಅವರದ್ದೇ ಸರ್ಕಾರದ ಇದೆ. ತನಿಖೆ ಮಾಡಬೇಕಾಗಿರುವವರೂ ಅವರೇ' ಎಂದರು.

'ನಾವು ಉಚಿತ ಭಾಗ್ಯಗಳನ್ನು ಘೋಷಣೆ ಮಾಡುತ್ತಿಲ್ಲ. ನಾವು ಏನು ಮಾಡುತ್ತೇವೆಯೋ ಅದನ್ನು ಹೇಳುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಿ.ಟಿ.ರವಿ ಹಗಲು ಕನಸು ಕಾಣುತ್ತಿದ್ದಾರೆ. ಮುಂದೆ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ. ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆಯೋ ಅದನ್ನೇ ಹೇಳುತ್ತಿದ್ದೇವೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.