ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿಯ ಸ್ಮರಣೆ

Published 14 ಏಪ್ರಿಲ್ 2024, 15:46 IST
Last Updated 14 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 133ನೇ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು, ಸರ್ಕಾರಿ ಕಚೇರಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು. 

ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ದೇಶಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.  

ಕಾಂಗ್ರೆಸ್‌ ಕಚೇರಿ: ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮರಿಸ್ವಾಮಿ, ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಹಾಗೂ ಇತರರು ಅಂಬೇಡ್ಕರ್‌ ಅವರ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. 

ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ‘ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ. ವಿಶ್ವ ಮಾನವ.  ಶೋಷಿತ ಸಮಾಜದ ಧ್ವನಿಯಾಗಿ ಸಂವಿಧಾನ ಬದ್ದವಾಗಿ ಎಲ್ಲ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಟ್ಟ ಮಹಾನ್ ನಾಯಕ’ ಎಂದರು. 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಅಭ್ಯರ್ಥಿ ಸುನಿಲ್‌ ಬೋಸ್‌ ಮಾತನಾಡಿದರು. 

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಮಾಜಿ ಸಂಸದ ಎಂ. ಶಿವಣ್ಣ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಎಸ್‌ಸಿ ಘಟಕದ ಅಧ್ಯಕ್ಷ ಸೋಮೇಶ್ವರ್, ಕೊಳ್ಳೇಗಾಲ ನಾಗರಾಜು, ಬ್ಲಾಕ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜಲ್ ಷರೀಫ್‌, ಲಕ್ಷ್ಮಿನಾರಾಯಣ್ ಇತರರು ಪಾಲ್ಗೊಂಡಿದ್ದರು. 

ಹೌಸಿಂಗ್‌ ಬೋರ್ಡ್‌: ನಗರದ ಹೌಸಿಂಗ್‌ ಬೋರ್ಡ್‌ ನಿವಾಸಿಗರು ಡಾ.ಬಿ.ಆರ್‌.ಅಂಬೇಡ್ಕರ್‌ ಉದ್ಯಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತಸೇನೆ ಸೇನಾ ಅಂಚೆ ಸೇವೆಯ ಉಪನಿರ್ದೇಶಕ ಮೇಜರ್ ಎಚ್.ಎಂ.ನಾಗರಾಜು, ‘ ಬುದ್ದನ ಸನ್ಮಾರ್ಗದಲ್ಲಿ ಸಾಗುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‌ ಅವರ ರಥವನ್ನು ಮುನ್ನಡೆಸುವಂತಾಗಬೇಕು. ಅಂಬೇಡ್ಕರ್ ಸಂವಿಧಾನದ ಮೂಲಕ ಕೊಟ್ಟ ಮೀಸಲಾತಿ ಋಣದಿಂದ ನಾವೆಲ್ಲರೂ ಉದ್ಯೋಗವಂತರಾಗಿ ಆರ್ಥಿಕವಾಗಿ ಸಬಲೀಕರಣ ಅನುಭವಿಸುತ್ತಿದ್ದೇವೆ. ಆದರೆ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗ ಹೆಚ್ಚಿನ ಜನರನ್ನು ತಲುಪಿಲ್ಲ’ ಎಂದರು. 

ಮುಖಂಡರಾದ ಭಾನುಪ್ರಕಾಶ್ ದೊಶಿ , ಉಮೇಶ್, ಕೃಷ್ಣಮೂರ್ತಿ, ನಾರಾಯಣ್, ಪ್ರಶಾಂತ್, ವಕೀಲ ಮಲ್ಲಿಕ್, ಅನಿಲ್‌ಕುಮಾರ್, ಶಿವು, ರಮೇಶ್ ಇತರರು ಭಾಗವಹಿಸಿದ್ದರು. 

ಚಂದಕವಾಡಿ: ತಾಲ್ಲೂಕಿನ ಚಂದಕವಾಡಿ ಗ್ರಾಮದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಶಾಖಾ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಷ ನಮನ ಸಲ್ಲಿಸಿ ಮಾತನಾಡಿದ ಕಿರಿಯ ಇಂಜಿನಿಯರ್ ಮರಿಸ್ವಾಮಿ, ‘ಅಂಬೇಡ್ಕರ್ ರವರ ಹರಿತವಾದ ಕಾನೂನುಗಳು ಇಂದು ದೇಶ ಮತ್ತು ಜನರ ಬೆನ್ನೆಲುಬಾಗಿ ನಿಂತಿದೆ. ಸರ್ವರಿಗೂ ಸಮಾನತೆ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸಿಕೊಟ್ಟವರು ಅಂಬೇಡ್ಕರ್’ ಎಂದರು. 

ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ಶಿವಣ್ಣ, ರವಿ, ದೊರೆಸ್ವಾಮಿ, ಚೇತನ್, ಬಾಗಳಿ ರಮೇಶ್, ಮಲ್ಲೇಶ್, ಸುನಿಲ್ ರಾಜ್, ಆನಂದ, ನಂದಕುಮಾರ್, ಸಿದ್ದರಾಜು, ಅಭಿಷೇಕ್, ಮೋಹನ್, ಪ್ರವೀಣ್, ಇತರರು ಇದ್ದರು.

‘ಅಂಬೇಡ್ಕರ್‌ ಸಾವಿನ ನಂತರವೂ ಕಾಂಗ್ರೆಸ್‌ನಿಂದ ಅವಮಾನ’ :
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ‘ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬದುಕಿದ್ದಾಗಲ್ಲೂ ಸಾವಿನ ನಂತರವೂ ಕಾಂಗ್ರೆಸ್ ಅವಮಾನಿಸುತ್ತಿದೆ’ ಎಂದು ದೂರಿದರು.  ‘ಅಂಬೇಡ್ಕರ್‌ ಅವರು ಸಂವಿಧಾನದಡಿಯಲ್ಲಿ ಸರ್ವರಿಗೂ ಸಮಾನತೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಅವರನ್ನು ಚುನಾವಣೆಯಲ್ಲಿ ಸೋಲಿಸಿತು. ಮರಣದ ನಂತರವೂ ಅಂತ್ಯಸಂಸ್ಕಾರಕ್ಕೆ ಜಾಗ ನೀಡದೆ ಅವಮಾನಿಸಿದೆ’ ಎಂದರು. ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ ‘ಅಂಬೇಡ್ಕರ್‌ ಅವರ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಇದಕ್ಕೆ ಯಾರು ಕಿವಿಗೊಡದಿರಿ’ ಎಂದರು. ಎಸ್‌ಸಿ ಮೋರ್ಚಾದ ಅಧ್ಯಕ್ಷ ಮೂಡಹಳ್ಳಿ ಎಚ್.ಮೂರ್ತಿ ಮಾತನಾಡಿದರು.  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್ ಟಗರಪುರ ರೇವಣ್ಣ ಕಾರ್ಯದರ್ಶಿ ನಟರಾಜು ಗ್ರಾಮಾಂತರ ಮಂಡಲ ಅಧ್ಯಕ್ಷ ಮಹೇಶ್ ಟೌನ್ ಅಧ್ಕಕ್ಷ ಶಿವರಾಜ್ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರುಶೇಖರ್ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್ ನಗರಸಭಾ ಸದಸ್ಯ ಕುಮುದಕೇಶವಮೂರ್ತಿ ಇತರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT