ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಸ್ಮರಣೆ ಇರಲಿ ನಿರಂತರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಮತ

ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರಿಂದ ಪುಷ್ಪನಮನ
Last Updated 7 ಡಿಸೆಂಬರ್ 2019, 10:07 IST
ಅಕ್ಷರ ಗಾತ್ರ

ಚಾಮರಾಜನಗರ: ‘ದೇಶದ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ತಂದುಕೊಟ್ಟ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಸ್ಮರಣೆ ನಿರಂತರವಾಗಿರಬೇಕು’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 63ನೇ ಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ಅವರುಜಗತ್ತೇಮೆಚ್ಚುವ ಸಂವಿಧಾನವನ್ನು ರಚಿಸಿದ್ದಾರೆ. ಈ ಮೂಲಕ ಭಾರತ ದೇಶದ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ತಂದುಕೊಟ್ಟಿದ್ದಾರೆ. ಹೀಗಾಗಿ, ನಾವೆಲ್ಲರೂ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಿಕೊಳ್ಳಬೇಕು.ಅವರು ಸಾಗಿ ಬಂದ ದಾರಿಯಲ್ಲಿ ನಡೆಯಬೇಕು’ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ‘ಅಂಬೇಡ್ಕರ್ ಬರೀ ವ್ಯಕ್ತಿ ಅಲ್ಲ ಅವರೊಬ್ಬಮಹಾನ್ ಶಕ್ತಿ. ದಲಿತರು, ಮಹಿಳೆಯರು ಹಾಗೂ ಕಾರ್ಮಿಕರ ಪರವಾಗಿ ಹೋರಾಡಿ, ಸಮಾಜದಲ್ಲಿ ಅವರ ಹಕ್ಕುಗಳನ್ನು ಸ್ಥಾಪಿಸಿದ್ದಾರೆ. ಅಂಬೇಡ್ಕರ್ ಅವರ ವಿಚಾರಧಾರೆ, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ರಚಿಸಿದ ಸಂವಿಧಾನದ ಆಶಯದಂತೆ ಸಮಾಜ ರೂಪಿಸಲು ಶ್ರಮಿಸಬೇಕು’ ಎಂದರು.

ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿಜಿಲ್ಲಾ ಪಂಚಾಯಿತಿಅಧ್ಯಕ್ಷೆಶಿವಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆಉಮಾವತಿ, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯ ನಿರ್ವಣಾಧಿಕಾರಿ ಬಿ.ಎಚ್.ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ್‌ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮುನಿರಾಜು, ತಾಲ್ಲೂಕು ಪಂಚಾಯಿತಿಸದಸ್ಯರಾದ ಕುಮಾರ್ ನಾಯಕ್, ಮಹದೇವಶೆಟ್ಟಿ ಹಾಗೂ ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT