ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಆ್ಯಪ್‌ನಲ್ಲಿ ಬೆಳೆ ಸಮೀಕ್ಷೆ ದಾಖಲಿಸಲು ಮನವಿ

Last Updated 25 ಜೂನ್ 2022, 6:47 IST
ಅಕ್ಷರ ಗಾತ್ರ

ಚಾಮರಾಜನಗರ: ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂಬರ್‌ವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಫೋಟೊ ಚಿತ್ರಸಹಿತ ಸಮೀಕ್ಷೆ ನಡೆಸಲು ಕೃಷಿ ಇಲಾಖೆ ಮೊಬೈಲ್‌ ಆ್ಯಪ್‌ ಅಭಿವೃದ್ಧಿ ಪಡಿಸಿದೆ.

ರೈತರು ಆಂಡ್ರಾಯ್ಡ್‌ ಮೊಬೈಲ್‌ನಲ್ಲಿ ‘ಮುಂಗಾರು ರೈತರ ಬೆಳೆ ಸಮೀಕ್ಷೆ ಆಪ್ 2022–23’ (Kharif Farmer Crop Survey App 2022-23 ) ಡೌನ್‌ಲೋಡ್ ಮಾಡಿಕೊಂಡು ತಾವೇ ಬೆಳೆ ಸಮೀಕ್ಷೆ ಮಾಡಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕಲು, ಬೆಳೆ ವಿಮೆ ಯೋಜನೆಯ ಸರ್ವೆ ನಂ. ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹಾಗೂ ಆರ್.ಟಿ.ಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎಸ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್. ನಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸಲು ಬಳಸಲಾಗುತ್ತದೆ.

ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಸಿದ್ದಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಆ್ಯಪ್‌ನಲ್ಲಿ ನಮೂದಿಸಬೇಕು.

ಖಾಸಗಿ ನಿವಾಸಿಗಳ (ಪಿ.ಆರ್) ಸಹಾಯದಿಂದಲೂ ಬೆಳೆ ಮಾಹಿತಿಯನ್ನು ಆ್ಯಪ್‌ಗೆ ಅಪ್‌ಲೋಡ್‌ ಬಹುದು.ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕ ಕೆ.ಮಧುಸೂಧನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT