ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಬಲ ಸೂಚಿಸಿದರು. ಮುಂದಿನ ಅಧಿವೇಶದಲ್ಲಿ ರೈತರ ಸಮಸ್ಯೆಗಳನ್ನು ಮಂಡಿಸಿ , ಪರಿಹಾರ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.

ತಾಲ್ಲೂಕು ಕಚೇರಿ ಮುಂದೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 22 ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘ ನಡೆಸುತ್ತಿರುವ ಧರಣಿ ನಿರತ ರೈತರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ‘ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ನಿಮ್ಮದು ನ್ಯಾಯಯುತ ಬೇಡಿಕೆಗಳು; ಹೋರಾಟ ಮಾಡಬೇಕಾದ ವಿಷಯವೇ ಅಲ್ಲ. ಇದಕ್ಕೆ ಸರ್ಕಾರ ಮನಸ್ಸು ಮಾಡಬೇಕು. ರಾಜ್ಯ ಸರ್ಕಾರಕ್ಕೆ ರೈತ ಪರ ಚಿಂತನೆ ಇಲ್ಲದಿರುವ ಕಾರಣ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ’ ಎಂದು ಕಿಡಿಕಾರಿದರು.

‘ಬೆಳಗಾವಿ, ಗುಂಡ್ಲುಪೇಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ರಾಜ್ಯ ಸರ್ಕಾರದ ವಿರುದ್ಧ ರಸ್ತೆಗಿಳಿದಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯೂ ಕೂಡ ರೈತರ ಪರವಾದ ಚಿಂತನೆ ಮಾಡಿ, ಅವರ ಜೊತೆ ಹೋರಾಟಕ್ಕೆ ನಿಂತಿದೆ. ಕಾಂಗ್ರೆಸ್ ಸರ್ಕಾರ ತಕ್ಷಣ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.

ಹೋರಾಟಕ್ಕೆ ಬೆಂಬಲ: ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಎನ್.ಮಹೇಶ್, ಬಾಲರಾಜು, ನಾಗೇಂದ್ರ ರೈತರ ಧರಣಿಗೆ ಬೆಂಬಲ ಸೂಚಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ‘ಕೆರೆಗಳಿಗೆ ನೀರು ತುಂಬಿಸಬೇಕು. ರೈತರಿಗೆ ಸಾಗುವಳಿ ನೀಡಬೇಕು. ಸಫಾರಿ ಬಂದ್ ಮಾಡಬೇಕು’ ಮುಂತಾದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹಂಗಳ ದಿಲೀಪ್, ಜಿಲ್ಲಾ ಉಪಾಧ್ಯಕ್ಷ ಮಾಧು, ನಾಗರಾಜು, ಶಿವಣ್ಣ, ಲೋಕೇಶ್, ಕುಮಾರ್, ಮಹದೇವಸ್ವಾಮಿ, ಕಬ್ಬಹಳ್ಳಿ ಆಚಾರ್, ಸುರೇಶ್, ಬಸವಣ್ಣ, ಮಹೇಶ್, ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.