ಚಾಮರಾಜನಗರ: ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಪರಿಶ್ರಮಿಸಿದಚಾಮರಾಜನಗರತಾಲ್ಲೂಕಿನ ಅರಕಲವಾಡಿ ಗ್ರಾಮ ಪಂಚಾಯಿತಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗುತ್ತಿರುವುದು ಇದು ಎರಡನೇ ಬಾರಿ. 2015–16ರಲ್ಲಿ ಈ ಗೌರಕ್ಕೆ ಗ್ರಾಮ ಪಂಚಾಯಿತಿ ಪಾತ್ರವಾಗಿತ್ತು.

ಅರಕಲವಾಡಿಗ್ರಾಮ ಪಂಚಾಯಿತಿ ವ್ಯಾಪ್ತಿ ಅರಕಲವಾಡಿ, ಯಾನಗಹಳ್ಳಿ, ಮೂಡಲ ಹೊಸಹಳ್ಳಿ, ಮಂಚುಗುಂಡಿಪುರ ಹಾಗೂ ಲಿಂಗನಪುರ ಒಟ್ಟು 5 ಗ್ರಾಮಗಳು ಸೇರುತ್ತವೆ.

‘ಕಂದಾಯ ವಸೂಲಿಯಲ್ಲಿ ಶೇ 100ರಷ್ಟು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶೇ 90ಕ್ಕಿಂತ ಹೆಚ್ಚಿನಪ್ರಗತಿ ಸಾಧನೆ, ಬೀದಿ ದೀಪ ಅಳವಡಿಕೆ ಮತ್ತು ನಿರ್ವಹಣೆಯೂ ಮಾಡಲಾಗುತ್ತಿದೆ’ ಎಂದು ಪಂಚಾಯಿತಿ ಅಧ್ಯಕ್ಷ ಮಹದೇವಯ್ಯ ‘ಪ್ರಜಾವಾಣಿ’ಗೆ ಹೇಳಿದರು.

‘ನೈರ್ಮಲ್ಯ ಗ್ರಾಮ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಎಲ್ಲ ಯೋಜನೆಗಳಲ್ಲೂ ಉತ್ತಮ ಸಾಧನೆ ಮಾಡಿದ್ದೇವೆ. ಗ್ರಾಮ ಪಂಚಾಯಿತಿಯಲ್ಲಿ ಸಕಾಲಕ್ಕೆ ಗ್ರಾಮ ಸಭೆಗಳನ್ನು ಆಯೋಜಿಸಿ ಗ್ರಾಮಸ್ಥರೊಂದಿಗೆ ಉತ್ತಮ ಸಂಬಂಧವನ್ನು ಪಂಚಾಯಿತಿ ಸದಸ್ಯರು,ಪಿಡಿಒಮತ್ತು ಸಿಬ್ಬಂದಿ ಹೊಂದಿದ್ದೇವೆ. ಈ ಕಾರಣಗಳಿಗಾಗಿ ಪ್ರಶಸ್ತಿಗೆ ನಮ್ಮ ಪಂಚಾಯಿತಿ ಆಯ್ಕೆಯಾಗಿದೆ’ ಎಂದು ಅವರು ಹೇಳಿದರು.

‘ಗ್ರಾಮ ಸಭೆಯ ನಡಾವಳಿಗಳನ್ನು ಪಂಚತಂತ್ರ ತಂತ್ರಾಂಶಕ್ಕೆ ಅಳವಡಿಸಿರುವುದುಕೂಡಗಾಂಧಿ ಗ್ರಾಮ ಪುರಸ್ಕಾರ ಲಭಿಸಲು ಮುಖ್ಯ ಕಾರಣ’ ಎಂದು ಅವರು ವಿವರಿಸಿದರು.

‘ಗ್ರಾಮೀಣ ಜನರಿಗೆ ಗುಣಮಟ್ಟದಆಡಳಿತ ನೀಡಿ ಗ್ರಾಮವನ್ನು ಅಭಿವೃದ್ಧಿಪಡಿಸಲು ಜನಪ್ರತಿನಿಧಿಗಳು ಸೇರಿದಂತೆ ಎಲ್ಲರೂ ನಿರಂತರ ಶ್ರಮವಹಿಸಿರುವಫಲವಾಗಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿರುವುದು ಸಂತಸ ತಂದಿದೆ’ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಫೈಝಲ್ ಉಲ್ರೆಹಮಾನ್ ಷರೀಫ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಸ್ತುತ ಜಲವರ್ಷ ಆಚರಣೆ ಮಾಡಲಾಗುತ್ತಿದೆ. ನೀರಿನ ಮಿತ ಬಳಕೆ ಉದ್ದೇಶದಿಂದ ಪಂಚಾಯಿತಿ ವ್ಯಾಪ್ತಿಯ ಎಲ್ಲ ಮನೆಗಳಿಗೆ ಮೀಟರ್ ಸಹಿತ ನೆಲ್ಲಿ ಅಳವಡಿಕೆ ಮಾಡಲಾಗುವುದು.
- ಫೈಝಲ್ ಉಲ್ರೆಹಮಾನ್ ಷರೀಫ್, ಪಿಡಿಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.