ಬುಧವಾರ, ಅಕ್ಟೋಬರ್ 21, 2020
24 °C

ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ; 1,793 ಮಂದಿ ಹಾಜರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ರಾಜ್ಯದಾದ್ಯಂತ ಭಾನುವಾರ ಲಿಖಿತ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲೂ ಯಾವುದೇ ಅಡಚಣೆ ಇಲ್ಲದೇ ಪರೀಕ್ಷೆ ನಡೆದಿದೆ. 

ನಗರದ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ 2,162 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 1,793 ಮಂದಿ ಪರೀಕ್ಷೆ ಬರೆದಿದ್ದಾರೆ. 369 ಗೈರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ನಗರದ ಸತ್ಯಮಂಗಲ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಬಿ. ರಾಚಯ್ಯ ಜೋಡಿ ರಸ್ತೆಯ ಜೆ.ಎಸ್.ಎಸ್. ಬಾಲಕಿಯರ ಪ್ರೌಢಶಾಲೆ, ಚೆನ್ನೀಪುರದಮೋಳೆ ರಸ್ತೆಯ ಸೇವಾ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಹರ್ಷಿ ಭಗೀರಥ ರಸ್ತೆಯ ಸೇವಾ ಭಾರತಿ ಪಬ್ಲಿಕ್ ಶಾಲೆ, ಸೋಮವಾರಪೇಟೆಯ ಎಂ.ಸಿ.ಎಸ್. ಪಬ್ಲಿಕ್ ಸ್ಕೂಲ್ ಹಾಗೂ ಕರಿನಂಜನಪುರದ ಶ್ರೀದೇವಿ ಟೆಕ್ಸ್ ಟೈಲ್ಸ್ ಹತ್ತಿರದ ಯೂನಿವರ್ಸ್ ಇಂಗ್ಲಿಷ್‌ ಸ್ಕೂಲ್‌ಗಳಲ್ಲಿ ಪರೀಕ್ಷೆ ನಡೆದಿದೆ. 

ಕೋವಿಡ್‌ ತಡೆಗೆ ಮುಂಜಾಗ್ರತಾ ಕ್ರಮವಾಗಿ, ಎಲ್ಲ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಸ್ಯಾನಿಟೈಸರ್‌ ಒದಗಿಸಲಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು