ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಜಿಂಕೆ ತಲೆ ಬುರುಡೆ ಸಾಗಿಸುತ್ತಿದ್ದ ಇಬ್ಬರ ಬಂಧನ

Published 4 ಜೂನ್ 2023, 15:37 IST
Last Updated 4 ಜೂನ್ 2023, 15:37 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಚೀಲದಲ್ಲಿ ಅಕ್ರಮವಾಗಿ ಎರಡು ಜಿಂಕೆ ತಲೆ ಬುರುಡೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲ್ಲೂಕಿನ ಸತ್ತೇಗಾಲದ ಹ್ಯಾಂಡ್ ಪೋಸ್ಟ್ ಅರಣ್ಯ ಚೆಕ್ ಪೋಸ್ಟ್ ಬಳಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ದೇವರಹಳ್ಳಿಯ ಹಾಲು ಮದಿಯಯ್ಯ ಹಾಗೂ ಬೇರೆಬಾಂಡಿಯ ಮಹದೇವ ನಾಯಕ ಬಂಧಿತ ಆರೋಪಿಗಳು.

ಇವರು ಎರಡು ಜಿಂಕೆಯ ಒಣಗಿದ ತಲೆ ಬುರುಡೆಯನ್ನು  ಮಾರಾಟ ಮಾಡುವ ಸಲುವಾಗಿ ಅಕ್ರಮವಾಗಿ ಸಾಗಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ವಿಜಯರಾಜು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಗಳಿಂದ ಜಿಂಕೆಯ ಒಣಗಿದ ತಲೆ ಬುರುಡೆ, ಎರಡು ಮೊಬೈಲ್, ₹ 750 ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ದೂರು ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT