ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ₹12 ಸಾವಿರ ಗೌರವ ಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಬೇಡಿಕೆ ಈಡೇರಿಸದಿದ್ದರೆ ಜುಲೈ 10ರಂದು ಆರೋಗ್ಯ ಸೇವೆ ಸ್ಥಗಿತ–ಆಶಾ ಕಾರ್ಯಕರ್ತರ ಎಚ್ಚರಿಕೆ
Last Updated 1 ಜುಲೈ 2020, 3:52 IST
ಅಕ್ಷರ ಗಾತ್ರ

ಚಾಮರಾಜನಗರ: ₹12 ಸಾವಿರ ಮಾಸಿಕ ಗೌರವಧನ ಖಾತ್ರಿ ಪಡಿಸಬೇಕು ಹಾಗೂ ಅಗತ್ಯ ಇರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಡಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ನೂರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನನಿರತ ಕಾರ್ಯಕರ್ತೆಯರು ಸುರಕ್ಷಿತ ಅಂತರ ಕಾಯ್ದುಕೊಂಡಿದ್ದು ವಿಶೇಷವಾಗಿತ್ತು.

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಅವರು ಮಾತನಾಡಿ, ‘ಸರ್ಕಾರ ಈಗ ಘೋಷಿಸಿರುವ ಪ್ರೋತ್ಸಾಹ ಧನ ಹಾಗೂ ಪ್ರತಿ ತಿಂಗಳು ನೀಡುವ ಗೌರವ ಧನ ಸೇರಿದಂತೆ ತಿಂಗಳಿಗೆ ₹12 ಸಾವಿರ ನೀಡಬೇಕು. ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ನಮಗೆ ಅಗತ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ನಮಗೆ ಬರಬೇಕಾದ ₹14 ಸಾವಿರ ಹಣ ಹಾಗೂ ಇತರ ಸೌಕರ್ಯಗಳನ್ನು ನೀಡಬೇಕು 10 ತಿಂಗಳುಗಳಿಂದಲೂ ಒತ್ತಾಯಿಸುತ್ತಾ ಬಂದಿದ್ದೇವೆ. ಆದರೆ, ಸರ್ಕಾರ ಇದುವರೆಗೆ ಸ್ಪಂದಿಸಿಲ್ಲ’ ಎಂದು ದೂರಿದರು.

‘ಎಲ್ಲ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್‌–19 ದೃಢಪಟ್ಟಿರುವ ಎಲ್ಲರಿಗೂ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು. ಚಿಕಿತ್ಸಾ ಅವಧಿಯಲ್ಲಿ ಪೂರ್ಣ ಗೌರವ ಧನ ನೀಡಬೇಕು. ಮಾಸ್ಕ್, ಕೈಗವಸು, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್‌ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡಬೇಕು’ ಎಂದು ಪ್ರತಿಭಟನನಿರತರು ಒತ್ತಾಯಿಸಿದರು.

ಬೇಡಿಕೆ ಈಡೇರಿಸದಿದ್ದರೆ ಜುಲೈ 10ರಂದು ರಾಜ್ಯದಾದ್ಯಂತ ಆಶಾ ಕಾರ್ಯಕರ್ತರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಎಐಯುಟಿಸಿ ರಾಜ್ಯ ಕಾರ್ಯಸಮಿತಿ ಸದಸ್ಯ ಚಂದ್ರಶೇಖರ್ ಮೇಟಿ, ಚಾಮರಾಜನಗರ ತಾಲ್ಲೂಕು ಅಧ್ಯಕ್ಷೆ ರಾಣಿ, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷೆ ಜ್ಯೋತಿಕಲಾ, ಜಿಲ್ಲಾ ಜಂಟಿ ಕಾರ್ಯದರ್ಶಿ ಶಮಾ, ಶಿವಮ್ಮ, ಶಶಿಕಲಾ, ಪ್ರಮಿಳಾ, ಲೀಲಾವತಿ, ಸುಗುಣ, ವಾಣಿ, ರುಕ್ಮಿಣಿ, ಶಬನಾ, ಪುಷ್ಪಲತಾ, ಕಮಲಾಕ್ಷಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT