ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೊಬ್ಬರು ಮೃತಪಟ್ಟಿದ್ದು, ಆಕ್ರೋಶಗೊಂಡ ರೋಗಿಯ ಸಂಬಂಧಿಕರು ಆಸ್ಪತ್ರೆಯ ಮೇಲೆ ಗುರುವಾರ ದಾಳಿ ನಡೆಸಿದ್ದಾರೆ.

ಈ ವೇಳೆ ಆಸ್ಪತ್ರೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಆಮ್ಲಜನಕದ ಸಿಲಿಂಡರ್ ಎತ್ತಿ ಎಸೆದಿದ್ದಲ್ಲದೇ, ತಡೆಯಲು ಮುಂದಾದ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಕಿಟಕಿ ಗಾಜುಗಳನ್ನು ಕೈಯಿಂದ ಒಡೆದು, ಗಾಯಗೊಂಡಿದ್ದ ಗಿರೀಶ್ ಮತ್ತು ಬಂಗಾರು ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು ಖಂಡಿಸಿ, ವೈದ್ಯಕೀಯ ಸಿಬ್ಬಂದಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಕೆಲಸಕ್ಕೆ ಮರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.