ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ, ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಇನ್ನಿಬ್ಬರ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
Published 4 ಏಪ್ರಿಲ್ 2024, 16:01 IST
Last Updated 4 ಏಪ್ರಿಲ್ 2024, 16:01 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಧನಗೆರೆ ಗ್ರಾಮದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೊ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಆಟೊ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಶಿವನಸಮುದ್ರದ ದರ್ಗಾದ ನಿವಾಸಿ ಸೈಯದ್ ಮನ್ಸೂರು ಹುಸೈನಿ (34) ಹಾಗೂ ಸತ್ತೇಗಾಲ ಹ್ಯಾಂಡ್ ಪೋಸ್ಟ್ ವಾಸಿ ನೂರಜಾನ್ (58) ಮೃತಪಟ್ಟವರು. ಗಾಯಾಳುಗಳಾದ ಅದೇ ಗ್ರಾಮದ ರೆಹಮತ್ ಉನ್ನೀಸಾ (42), ಬೆಂಗಳೂರಿನ ಶಂಶಾದ್ ಬೇಗಂ (51) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಾಗಿದ್ದ ನೂರ್‌ಜಾನ್ ಅವರ ಸೊಸೆಯನ್ನು ನೋಡಲು ಆಟೊದಲ್ಲಿ ಹ್ಯಾಂಡ್‌ಪೋಸ್ಟ್‌ನಿಂದ ಬರುತ್ತಿದ್ದ ವೇಳೆ ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ಕೈ ಹಾಗೂ ಕಾಲಿಗೆ ತೀವ್ರವಾಗಿ ಪೆಟ್ಟಾಗಿರುವ ಶಂಶಾದ್ ಬೇಗಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮತ್ ಉನ್ನೀಸಾ ಅವರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಪರಿಶೀಲನೆ ನಡೆಸಿದರು. ಪದೇಪದೇ ಈ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ, ಹಾಗಾಗಿ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಅಪಘಾತವಾದ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT