ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ: ನಿಯಂತ್ರಣ ತಪ್ಪಿ ಆಟೋ ಪಲ್ಟಿ

Published 19 ಮೇ 2024, 14:20 IST
Last Updated 19 ಮೇ 2024, 14:20 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋವೊಂದು ಪಲ್ಟಿಯಾಗಿರುವ ಘಟನೆ ಗುಂಡ್ಲುಪೇಟೆ-ಊಟಿ ಹೆದ್ದಾರಿ ರಸ್ತೆಯ ಸೆತ್ತೇಕಟ್ಟೆ ಗೇಟ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದ ಗೂಡ್ಸ್ ಆಟೋ ಸೆತ್ತೆ ಕಟ್ಟೆ ತಿರುವಿನಲ್ಲಿ ಪಲ್ಟಿ ಹೊಡೆದಿದೆ. ಮುಂಬದಿ ಬೈಕ್ ಗೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆಟೋ ಚಾಲಕ ಹಾಗೂ ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಡು ರಸ್ತೆಯಲ್ಲಿ ಆಟೋ ಪಲ್ಟಿಯಾದ ಕಾರಣ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗೂಡ್ಸ್ ಆಟೋ ರಸ್ತೆಯಿಂದ ಪಕ್ಕಕ್ಕೆ ಸರಿಸಿ ನಂತರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಇನ್ನೂ ಸಣ್ಣಪುಟ್ಟ ಗಾಯವಾದ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT