ಶನಿವಾರ, ಅಕ್ಟೋಬರ್ 1, 2022
23 °C

ಚಾಮರಾಜನಗರ: ಜಿಲ್ಲೆಯಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರಧಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.

ಕ್ರೀಡಾಂಗಣದ ಸುತ್ತ ತೆರೆದ ವಾಹನದಲ್ಲಿ ಸಾಗಿದ  ಸಚಿವರು, ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಅಬಕಾರಿ, ಎನ್ ಸಿಸಿ ಸೇರಿದಂತೆ ವಿವಿಧ ತುಕಡಿಗಳ ಪರಿವೀಕ್ಷಣೆ ಮಾಡಿದರು.

24 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಸಾವಿರಾರು ಜನರ ಸಮ್ಮುಖದಲ್ಲಿ ನಡೆದ ಆಕರ್ಷಕ ಪಥಸಂಚಲನ ಗಮನಸೆಳೆಯಿತು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ, ಜಿಲ್ಲಾಧಿಕಾರಿ‌ ಚಾರುಲತಾ ಸೋಮಲ್, ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ ಸೇರಿದಂತೆ ವಿವಿಧ ಅಧಿಕಾರಿಗಳು, ನಗರಸಭಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು