ಹನೂರು: ಮಕ್ಕಳಿಗೆ ಕಲಿಕೆಯ ಜೊತೆಗೆ ಅವರಿಗೆ ಬೇಕಾದ ಪೌಷ್ಟಿಕ ಆಹಾರ ಒದಗಿಸಬೇಕು. ಆ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು, ಜೊತೆಗೆ ಫೌಂಡೇಶನ್ ಮುಂದೆ ಬಂದಿರುವುದು ತುಂಬಾ ಒಳ್ಳೆಯ ಬೆಳವಣಿಗೆ ಎಂದು ಶಾಸಕ ಎಂ. ಆರ್. ಮಂಜುನಾಥ್ ಹೇಳಿದರು.
ತಾಲೂಕಿನ ಬಸಪ್ಪನದೊಡ್ಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಆಯೋಜಿಸಿದ್ದ ಶಾಲಾ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ವಾರದಲ್ಲಿ 6 ದಿನ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯ ಕ್ರಮ ಉದ್ಘಾಟಟಿಸಿ ಅವರು ಮಾತನಾಡಿದರು. ಶಾಲೆಯಲ್ಲಿ ಈಗಾಗಲೇ ಕಂಪ್ಯೂಟರ್ ಕಲಿಕೆಗೆ ಒತ್ತು ನೀಡಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಾತನಾಡಿ, ಪೂರಕ ಆಹಾರವನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕು ಎoದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಸೂಳೇರಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುತ್ತುರಾಜು, ಹಾಗೂ ಇಸಿಒ ಅಶೋಕ್, ಮುಖ್ಯ ಶಿಕ್ಷಕ ವೀರಪ್ಪ, ಸಿಆರ್‌ಸಿ ಚಂದ್ರು ಶೇಖರ್, ಗ್ರಾಮ ಪಿಡಿಒ ಮಾದೇಶ ಇದ್ದರು.