ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ | ಹೆಣ್ಣು ಮರಿಯಾನೆ ಸಾವು

Published 28 ಜೂನ್ 2023, 19:08 IST
Last Updated 28 ಜೂನ್ 2023, 19:08 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3–4 ವರ್ಷದ ಹೆಣ್ಣು ಮರಿಯಾನೆ ಮೃತಪಟ್ಟಿದೆ.

ವನ್ಯಪ್ರಾಣಿಗಳ ದಾಳಿಯಿಂದ ಆನೆ ಮರಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಹಾಗೂ ಕುಂದುಕೆರ ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಂಡೀಪುರ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ ಅವರು ಮರಿಯಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಮೇಲಧಿಕಾರಿಗಳ ಅನುಮತಿ ಪಡೆದು ವನ್ಯಪ್ರಾಣಿಗಳ ಆಹಾರಕ್ಕಾಗಿ ಕಳೇಬರವನ್ನು ಪ್ರಕೃತಿಯಲ್ಲೇ ಬಿಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT