ಮಂಗಳವಾರ, ಅಕ್ಟೋಬರ್ 27, 2020
22 °C

ಚಾಮರಾಜನಗರ: ಮಳೆಗೆ ಬಾಳೆ ಫಸಲು ಹಾನಿ, ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ತಾಲ್ಲೂಕಿನಲ್ಲಿ ಶನಿವಾರ- ಭಾನುವಾರ  ಸುರಿದ ಗಾಳಿ ಸಹಿತ ಬಿರುಸಿನ ಮನೆಗೆ ವಿವಿಧ ಕಡೆಗಳಲ್ಲಿ ಕಟಾವಿನ ಹಂತಕ್ಕೆ ಬಂದಿದ್ದ ಬಾಳೆ ಫಸಲು ನೆಲಕ್ಕಚ್ಚಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. 

ತಾಲ್ಲೂಕಿನ ಬೆಂಡರವಾಡಿ - ಮೇಗಲಹುಂಡಿ ವ್ಯಾಪ್ತಿಯಲ್ಲಿ ಹತ್ತಾರು ಎಕರೆಯಲ್ಲಿ ಬಾಳೆ ನಾಶವಾಗಿದೆ. ಉತ್ತಮ ಫಸಲಿನ‌ ನಿರೀಕ್ಷೆಯಲ್ಲಿದ್ದ ರೈತರು ಭಾರಿ ನಷ್ಟವಾಗುವ ಭೀತಿಯಲ್ಲಿದ್ದಾರೆ.

ಬೆಳೆಹಾನಿ ಪರಿಶೀಲನೆ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸೋಮವಾರ ತಾಲ್ಲೂಕಿನ ಬೆಂಡರವಾಡಿ- ಮೇಗಲಹುಂಡಿಯಲ್ಲಿ ಬಾಳೆ ಬೆಳೆ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ರೈತರಿಂದ ಮಾಹಿತಿ ಪಡೆದ ಅವರು ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು. 

ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಅವರು ಈ ಸಂದರ್ಭದಲ್ಲಿ ಇದ್ದರು. 

ಫಸಲು ಕಳೆದುಕೊಂಡ ರೈತರಿಗೆ ಪ್ರಕೃತಿ ವಿಕೋಪ ಯೋಜನೆಯ ಅಡಿಯಲ್ಲಿ ಗರಿಷ್ಠ ಮಟ್ಟದಲ್ಲಿ ಪರಿಹಾರ ನೀಡುವುದಕ್ಕೆ ಕ್ರಮ ಕೈಗೊಳ್ಳುವಂತೆ ಪುಟ್ಟರಂಗಶೆಟ್ಟಿ ಅವರು ತಹಶೀಲ್ದಾರ್‌ ಅವರಿಗೆ ಸೂಚಿಸಿದರು. 

ಮುತ್ತಿಗೆ ಮತ್ತು ಪಣ್ಯದಹುಂಡಿ ಗ್ರಾಮದಲ್ಲಿ ಮಳೆಯಿಂದ ಕುಸಿತಗೊಂಡ ಮನೆಗಳನ್ನೂ ಪರಿಶೀಲಿಸಿದ ಶಾಸಕರು, ಆಶ್ರಯ ಯೋಜನೆಯಲ್ಲಿ ಮನೆ ಮಂಜೂರು ಮಾಡಿಸುವ ಭರವಸೆಯನ್ನು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು